More

    ಸಿಎಂ ನಿವಾಸ ಎದುರು ಪ್ರತಿಭಟನೆ

    ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಯಂತೆ ಆ.22 ರಂದು ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಶಿಗ್ಗಾಂವಿಯಲ್ಲಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭೆ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದರು.
    ಕಳೆದ ಒಂದು ವರ್ಷದಿಂದ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನವರೆಗೆ ಪಾದಯಾತ್ರೆ ನಡೆದಿದೆ. ರಾಜ್ಯದೆಲ್ಲೆಡೆ ಪ್ರತಿಜ್ಞಾ ಪಂಚಾಯತ್ ಮೂಲಕ ಗೌಡ ಲಿಂಗಾಯತ, ಮಲೆ ಗೌಡ ಲಿಂಗಾಯತರು, ದೀಕ್ಷಾ ಲಿಂಗಾಯತರ ಸಭೆಗಳನ್ನು ಆಯೋಜಿಸಲಾಗಿದೆ. ಇದನೆಲ್ಲ ಗಮನಿಸಿ ಹಿಂದುಳಿದ ಆಯೋಗದ ವರದಿ ಪಡೆದು ಸಿಎಂ ಮೀಸಲಾತಿ ಘೋಷಿಸುವ ಭರವಸೆ ನೀಡಿದ್ದಾರೆ. ತಮ್ಮ ಮಾತಿನಂತೆ ನಡೆದುಕೊಳ್ಳಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಪಾದಯಾತ್ರೆ ನಡೆಸಿದ ಸಂದರ್ಭದಲ್ಲಿ ಸಿಎಂ ಆಗಿದ್ದ ಯಡಿಯೂರಪ್ಪ ಅವರು ಮೀಸಲಾತಿ ಭರವಸೆ ನೀಡಿದ್ದರು. 6 ತಿಂಗಳು ಗಡವು ಪಡೆದರೂ ಬೇಡಿಕೆ ಈಡೇರಲಿಲ್ಲ. ಮೀಸಲಾತಿ ನೀಡುವ ಕುರಿತು ಆ.22 ವರೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಾಲಾವಕಾಶ ಕೇಳಿದ್ದರು. ಇದೀಗ ಭರವಸೆ ಈಡೇರಿಸಬೇಕು. ಮೀಸಲಾತಿ ಘೋಷಣೆಯಾಗದಿದ್ದರೆ ಶಿಗ್ಗಾವಿಯ ಸಿಎಂ ಮನೆ ಎದುರು ಅನಿರ್ದಿಷ್ಟಾವಧಿಗೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದರು.

    ನಾವು ಮೀಸಲಾತಿ ಪಡೆಯುವ ಮೂಲಕ ಯಾವ ಸಮಾಜದ ಮೀಸಲಾತಿಯನ್ನೂ ಕಿತ್ತುಕೊಳ್ಳುತ್ತಿಲ್ಲ. ನಮ್ಮ ಸಮಾಜದ ಮಕ್ಕಳಿಗೆ ಶಿಕ್ಷಣ, ಉದ್ಯೋಗಕ್ಕಾಗಿ ಬೇಡಿಕೆ ಮಂಡಿಸಿದ್ದೇವೆ. ಇದಕ್ಕೆ ವಿರೋಧ ವ್ಯಕ್ತಪಡಿಸಿವುದು ಸಲ್ಲ. ಬೇರೆ ಸಮಾಜದ ಹೋರಾಟಕ್ಕೆ ಕೈ ಜೋಡಿಸುತ್ತೇವೆ. ಹೋರಾಟದಲ್ಲಿ ಮೂರನೇ ಪೀಠದ ಬೆಂಬಲದ ಬಗ್ಗೆ ನನಗೆ ಗೊತ್ತಿಲ್ಲ. ನಮಗಿರುವುದು ಕೂಡಲಸಂಗಮ ಪೀಠವೊಂದೇ. ಮೂರನೇ ಪೀಠ ಹೊಸದಾಗಿ ಸೃಷ್ಟಿಯಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts