More

    ಸಿಎಂ ಬದಲಾವಣೆ ಕೇವಲ ಊಹಾಪೋಹ, ಸಚಿವ ಗೋವಿಂದ ಕಾರಜೋಳ ಹೇಳಿಕೆ, ಸಂಕಷ್ಟ ನಿವಾರಣೆಯೇ ಸರ್ಕಾರದ ಮೊದಲ ಆದ್ಯತೆ

    ವಿಜಯಪುರ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಅದಕ್ಕೆಲ್ಲ ಕಿವಿಗೊಡಬಾರದು ಎಂದು ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು.
    ರಾಜ್ಯದಲ್ಲಿ ಒಂದು ಕಡೆ ಪ್ರವಾಹ ಇದೆ. ಇನ್ನೊಂದು ಕಡೆ ಕರೊನಾ ಮತ್ತು ಮಳೆ ಅವಾಂತರ ಸೃಷ್ಟಿಯಾಗಿದೆ. ಬೆಳೆ ಹಾನಿಯಾಗಿದೆ. ಆ ಬಗ್ಗೆ ಚರ್ಚೆಯಾಗಬೇಕಿದೆ ವಿನಃ ಸಿಎಂ ಬದಲಾವಣೆ ಬಗ್ಗೆ ಅಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
    ನಮ್ಮದೇ ಪಕ್ಷದ ಸಚಿವರು ಸಿಎಂ ಬದಲಾವಣೆ ಹೇಳಿಕೆ ನೀಡಿರಬಹುದು‌. ಆ ಬಗ್ಗೆ ಮಾಧ್ಯಮಗಳ ಮೂಲಕ ನನ್ನ ಸಲಹೆ ಅವರಿಗೆ ತಲುಪಲಿದೆ ಎಂದರು.
    ಇನ್ನು ಗುತ್ತಿಗೆದಾರರು
    ಕಮೀಷನ್ ಗೆ ಸಂಬಂಧಿಸಿದಂತೆ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಅವರು ತನಿಖೆಗೆ ಸೂಚಿಸಿದ್ದಾರೆ. ತನಿಖೆ ವರದಿ ಬಂದ ನಂತರ ನೋಡೋಣ. ಬಿಜೆಪಿ ಸರ್ಕಾರ ಇರಲಿ ಈ ಹಿಂದಿನ ಎಲ್ಲ ಸರ್ಕಾರಗಳ ಅವಧಿಯಲ್ಲಾದ ಕಮಿಷನ್ ದಂಧೆ ಬಗ್ಗೆ ತನಿಖೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
    ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲು ಗೆಜೆಟ್ ಆಗಬೇಕು. ಅಲ್ಲದೇ, ನ್ಯಾಯಾಲಯದಲ್ಲಿ ವ್ಯಾಜ್ಯ ಇದೆ. ಹೀಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಕರಣಗೊಳಿಸಲು ವಿಳಂಬವಾಗಿದೆ ಎಂದರು.

    ವಿಧಾನ ಪರಿಷತ್ ಚುನಾವಣೆ:
    ವಿಜಯಪುರ- ಬಾಗಲಕೋಟೆ ವಿಧಾನ ಪರಿಷತ್ ಕ್ಷೇತ್ರಕ್ಕೆ
    1988 ರಲ್ಲಿ ಅವಿರೋಧ ಆಯ್ಕೆಯಾದ ಇತಿಹಾಸ ಇತ್ತು. ಅದೇ ತೆರನಾಗಿ ಈ ಬಾರಿ ಎರಡೂ ರಾಷ್ಟ್ರೀಯ ಪಕ್ಷಗಳು ಸೇರಿ ಅವಿರೋಧ ಆಯ್ಕೆ ಬಯಸಿದ್ದು ನಿಜ. ಆದರೆ ಕಾಂಗ್ರೆಸ್ ನಿಂದ ಬಂಡಾಯ ಅಭ್ಯರ್ಥಿ ಸ್ಪರ್ಧೆಗೆ ನಿಂತಿದ್ದರಿಂದ ಚುನಾವಣೆ ಅನಿವಾರ್ಯ ಆಯಿತು ಎಂದು ಕಾರಜೋಳ ತಿಳಿಸಿದರು.
    ವಿಜಯಪುರ -ಬಾಗಲಕೋಟೆ
    4300 ಬಿಜೆಪಿ ಬೆಂಬಲಿತ ಮತಗಳಿವೆ. ಎರಡೂ ಜಿಲ್ಲೆ ಸೇರಿ 9 ಜನ ವಿಧಾನ ಸಭೆ ಸದಸ್ಯರು, ಇಬ್ಬರು ವಿಧಾನ ಪರಿಷತ್ ಹಾಗೂ ಇಬ್ಬರು ಲೋಕಸಭೆ ಸದಸ್ಯರಿದ್ದಾರೆ. ಎಲ್ಲರೂ ಸೇರಿ ನರೇಂದ್ರ ಮೋದಿ ಅವರ ಕಳೆದ ಏಳು ವರ್ಷಗಳ ಸಾಧನೆ ಮುಂದಿಟ್ಟುಕೊಂಡು ಮತ ಕೇಳುತ್ತೇವೆ ಎಂದರು.
    ಎರಡು ವರ್ಷ ಯಡಿಯೂರಪ್ಪ ಅವರು ಮಾಡಿದ ಸಾಧನೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಾಧನೆ ಮುಂದಿಟ್ಟುಕೊಂಡು ಮತ ಕೇಳುತ್ತೇವೆ ಎಂದರು.
    ಸುಮಾರು 56 ವರ್ಷಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಪಂಚಾಯಿತಿ ಅಭಿವೃದ್ಧಿ ಗೆ ಶ್ರಮಿಸಲಿಲ್ಲ. ಮಹಾತ್ಮ ಗಾಂಧಿ ಕಂಡ ಗ್ರಾಮ ಸ್ವರಾಜ್ ಹಾಗೂ ರಾಮ ರಾಜ್ಯದ ಕನಸು ಸಾಕಾರಗೊಳ್ಳಲಿಲ್ಲ. ಆದರೆ ಮೋದಿ ಅವಧಿಯಲ್ಲಿ ಗ್ರಾಮ ಪಂಚಾಯತಿಗಳು ಸ್ವತಂತ್ರ ವಾಗಿ ಕಾರ್ಯನಿವರ್ಹಿಸುತ್ತಿವೆ ಎಂದರು.
    ಪಂಚಾಯತ್ ರಾಜ್ ವ್ಯವಸ್ಥೆ ಇನ್ನಷ್ಟು ಬಲಪಡಿಸಲು ಬಿಜೆಪಿ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ಹಿರಿಯ ಅನುಭವಿ ನಾಯಕರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಕಣಕ್ಕಿಳಿಸಿದ್ದೇವೆ‌. ಕನಿಷ್ಠ 15 ಸ್ಥಾನಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದರು.
    ಕಾಂಗ್ರೆಸ್ ನಲ್ಲಿ‌ ಅಸಮಾಧಾನ ಭುಗಿಲೆದ್ದಿದೆ‌. ಕಾಂಗ್ರೆಸ್ ನಲ್ಲಿ ಬಂಡಾಯದ ಅಭ್ಯರ್ಥಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಲ್ಲಿ ಗುರುಲಿಂಗಪ್ಪ ಅಂಗಡಿ ನಾಮ ಪತ್ರ ಸಲ್ಲಿಸಿದ್ದರು‌. ಆದರೆ ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ದವಾಗಿ ಹಿಂದೆ ಸರಿದಿದ್ದಾರೆ ಎಂದರು.
    ಪಂಚಾಯತ್ ರಾಜ್ ವ್ಯವಸ್ಥೆ ಬಲಿಷ್ಠವಾಗಿಲ್ಲ. ಈ ಹಿಂದಿನ ಸರ್ಕಾರ ಮೂರು ಹಂತದ ಪಂಚಾಯತ್ ವ್ಯವಸ್ಥೆ ಜಾರಿಗೆ ತಂದಿದ್ದರಿಂದ ವ್ಯವಸ್ಥೆ ದುರ್ಬಲವಾಯಿತು. 1987 ರಲ್ಲಿ ರಾಜ್ಯದಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದ ಸರ್ಕಾರ ದೇಶದಲ್ಲೇ ಅತ್ಯುತ್ತಮ ಪಂಚಾಯತ್ ರಾಜ್ಯ ವ್ಯವಸ್ಥೆ ಜಾರಿಗೆ ತಂದಿದ್ದರು.
    ಹೀಗಾಗಿ ಪಂಚಾಯತ್ ರಾಜ್ಯ ವ್ಯವಸ್ಥೆ ಬಲಿಷ್ಠ ಗೊಳಿಸಲು ನರೇಂದ್ರ ಮೋದಿ ನೇತೃತ್ವ ಶ್ರಮಿಸಲಾಗುವುದು. ಗ್ರಾಮೀಣ ಜನರಿಗೆ ಕುಡಿಯುವ ನೀರು ಕಲ್ಪಿಸಲು ಜಲ ಜೀವನ ಮಿಷನ್ ಜಾರಿಗೊಳಿಸಲಾಗಿದ್ದು ಪ್ರಥಮ ಕಂತಿನಲ್ಲಿ 8500 ಕೋಟಿ ರೂ‌. ಬಿಡುಗಡೆ ಮಾಡಲಾಗಿದೆ. ಈ ಎಲ್ಲ ಸಾಧನೆ ಮುಂದಿಟ್ಟುಕೊಂಡು ಮತ ಕೇಳುತ್ತೇವೆ ಎಂದರು.
    ದೀನ ದಲಿತರು, ಅಲ್ಪಸಂಖ್ಯಾತ ರು ತಮ್ಮ ಪರ ಇದ್ದಾರೆ ಎಂದು
    ಕಾಂಗ್ರೆಸ್ ಭ್ರಮೆಯಲ್ಲಿದೆ. ಆದರೆ ಅವರೆಲ್ಲ ಕಾಂಗ್ರೆಸ್ ನ ಕೈ
    ಬಿಟ್ಟಿದ್ದರಿಂದ ಎಲ್ಲ ಕಡೆ ಕಾಂಗ್ರೆಸ್ ಸೋಲನುಭವಿಸುತ್ತಿದೆ. ಬರುವ
    ದಿನಗಳಲ್ಲಿ ಕಾಂಗ್ರೆಸ್ ಮುಕ್ತ ಭಾರತ ಆಗಲಿದೆ ಎಂದರು.
    ವಿಧಾನ ಪರಿಷತ್ ಅಭ್ಯರ್ಥಿ ಪಿ.ಎಚ್. ಪೂಜಾರ,
    ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ
    ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಚಂದ್ರಶೇಖರ ಕವಟಗಿ, ಉಮೇಶ ಕೋಳಕೂರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts