More

    ಸಿಎಎ ಹಿಂಪಡೆಯುವಂತೆ ನ್ಯಾಷನಲ್ ವುಮನ್ ಪ್ರಂಟ್, ವುಮನ್ಸ್ ಇಂಡಿಯಾ ಮೂಮೆಂಟ್ ಸಂಘಟನೆ ಪಟ್ಟು

    ರಾಮನಗರ :  ಕೇಂದ್ರ ಸರ್ಕಾರಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ನ್ಯಾಷನಲ್ ವುಮನ್ ಪ್ರಂಟ್ ಹಾಗೂ ವುಮನ್ಸ್ ಇಂಡಿಯಾ ಮೂಮೆಂಟ್ ಸಂಘಟನೆಗಳ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
    ನಗರದ ಜಿಲ್ಲಾಧಿಕಾರಿ ಎದುರು ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯದ ಅಭಿಪ್ರಾಯ ಕೇಳದೆ ಬಲವಂತವಾಗಿ ಕಾಯ್ದೆ ಜಾರಿಗೆ ತಂದಿದೆ. ವಿವಾದಾತ್ಮಕ ಎನ್‌ಆರ್‌ಸಿ, ಎನ್‌ಪಿಆರ್‌ಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
    ಈ ಮಸೂದೆ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ. ಸಂವಿಧಾನದ 14ನೇ ವಿಧಿ ಉಲ್ಲಂಘನೆ ಮಾಡಿದಂತಾಗುತ್ತದೆ. ಧರ್ಮದ ಆಧಾರದ ಮೇಲೆ ಪೌರತ್ವ ನಿರ್ಧರಿಸುವ ಸಂವಿಧಾನ ವಿರೋಧಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದುಕೊಳ್ಳಬೇಕು. ಸರ್ಕಾರದ ಪರವಾಗಿ ಕೆಲಸ ಮಾಡುತ್ತಿರುವ ಕೆಲ ಪೊಲೀಸ್ ಅಧಿಕಾರಿಗಳು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಜೆಎನ್‌ಯು ವಿಶ್ವವಿದ್ಯಾಲಯ ಹಾಗೂ ರಾಜ್ಯದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್, ಗೋಲಿಬಾರ್ ನಡೆಸುತ್ತಿದ್ದಾರೆ. ಹಲ್ಲೆಗೆ ಒಳಗಾದವರ ಮೇಲೆಯೇ ಸರ್ಕಾರ ಪ್ರಕರಣಗಳನ್ನು ದಾಖಲಿಸುತ್ತಿರುವುದು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ ಎಂದರು.
    ಸಂಘಟನೆ ಪದಾಧಿಕಾರಿಗಳಾದ ಶಬರೀನ್ ತಾಜ್, ಸುಮೇರಾ, ಅಲ್ಮಾಸ್, ಸಿರಾಜುನ್ನಿಸಾ, ಮಾಹಿಯಾ ಮತ್ತಿತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts