More

    ಸಿಡಿಲು ಬಡಿದು ರೈತ ಸಾವು

    ಸರಗೂರು: ತಾಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ಸೋಮವಾರ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ತಾಲೂಕಿನ ಹುಲ್ಲೇಮಾಳ ಗ್ರಾಮದ ಮುತ್ತಯ್ಯ (70) ಮೃತರು. ಮಳೆಯಾಗಿದ್ದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಹೊಲದಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿಸುತ್ತಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸರಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರಗೂರು ಸಾರ್ವಜನಿಕರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಸಂಬಂಧ ಸರಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪೋಟೋ ಕ್ಯಾಪ್ಶನ್..
    24 ಎಸ್ ಆರ್ ಜಿ 7.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts