More

    ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ಗೆಲುವು ಖಚಿತ: ಶಾಸಕ ಕೆ.ವೈ.ನಂಜೇಗೌಡ ವಿಶ್ವಾಸ, ಕ್ಷೇತ್ರದ ಅಭಿವೃದ್ಧಿಗೆ ಯಾವ ತ್ಯಾಗಕ್ಕೂ ಸಿದ್ಧ

    ಕೋಲಾರ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಹಾಲಿ ನಾಯಕ ಸಿದ್ದರಾಮಯ್ಯ 2023ರ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದ್ದರೆ ಕನಿಷ್ಠ 1 ಲಕ್ಷ ಮತಗಳ ಲೀಡ್‌ನಿಂದ ಗೆಲ್ಲುವುದು ಖಚಿತ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಸಿದ್ದರಾಮಯ್ಯ ಕೋಲಾರದಿಂದ ಆಯ್ಕೆಯಾದರೆ ಇಡೀ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
    ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಬೇಕೆಂಬ ಆಸೆ ಹೊತ್ತಿದ್ದಾರೆ, ಒಂದು ವೇಳೆ ಸ್ಪರ್ಧೆಗೆ ಒಪ್ಪಿ ನಾಮಪತ್ರ ಸಲ್ಲಿಸಿ ಬೇರೆಡೆ ಪ್ರಚಾರಕ್ಕೆ ಹೋದರೂ ಗೆಲುವು ಸಾಧಿಸುವರು, ಪಕ್ಷಾತೀತವಾಗಿ ಇವರನ್ನು ಜನ ಆಯ್ಕೆ ಮಾಡಲು ಮುಂದೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಒಂದು ವೇಳೆ ಸಿದ್ದರಾಮಯ್ಯ ಮಾಲೂರು ಕ್ಷೇತ್ರ ಆಯ್ಕೆ ಮಾಡಿಕೊಂಡಲ್ಲಿ ಅವರಿಗೆ ಕ್ಷೇತ್ರ ಬಿಟ್ಟುಕೊಡಲು ಒಪ್ಪುವಿರೇ ಎಂದಾಗ, ಸಂತೋಷದಿಂದ ಕೆಲಸ ಮಾಡುವೆ, ಕ್ಷೇತ್ರದ ಅಭಿವೃದ್ಧಿಗೆ ಯಾವ ತ್ಯಾಗಕ್ಕೂ ಸಿದ್ಧ, ಆದರೆ ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಕಣಕ್ಕೆ ಇಳಿಸಬೇಕೆಂಬ ಚರ್ಚೆ ಮುನ್ನಲೆಯಲ್ಲಿದೆ ಎಂದರು.

    ಇಬ್ರಾಹಿಂ ಪಕ್ಷ ಬಿಡಲ್ಲ: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನ ಸಿಕ್ಕಿಲ್ಲವೆಂದು ಸಿ.ಎಂ.ಇಬ್ರಾಹಿಂ ಬೇಸರಗೊಂಡಿರುವುದು ಸಹಜ, ಇಬ್ರಾಹಿಂ ಮತ್ತು ಸಿದ್ದರಾಮಯ್ಯನಡುವೆ ಉತ್ತಮ ಒಡನಾಟ ಇರುವುದರಿಂದ ಪಕ್ಷ ಬಿಡುವುದಕ್ಕೆ ಅವಕಾಶ ನೀಡಲಾರರು ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

    ವಿಧಾನ ಪರಿಷತ್ ಪ್ರತಿಪಕ್ಷದ ನಾಯಕತ್ವ ಸ್ಥಾನ ಯಾರಿಗೆ ನೀಡಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸಿ ತೀರ್ಮಾನ ಕೈಗೊಂಡಿದೆ. ಇದರಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೂ ಇರಲಾರದು, ಕಾಂಗ್ರೆಸ್‌ನ ಹಿರಿಯ ನಾಯಕರಾದ ಇಬ್ರಾಹಿಂ ಪಕ್ಷದ ಪರಿಸ್ಥಿತಿ ಅರ್ಥ ಮಾಡಿಕೊಂಡು ನಿಲುವು ಬದಲಾಯಿಸಿಕೊಳ್ಳುವ ವಿಶ್ವಾಸವಿದೆ ಎಂದರು.

    ನಮ್ಮ ಜಿಲ್ಲೆಯವರೇ ಆದ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮ್ಮದ್‌ಗೂ ಪ್ರತಿಪಕ್ಷದ ಸ್ಥಾನ ಸಿಗದಿರುವುದು ಬೇಸರವನ್ನುಂಟು ಮಾಡಿದೆ, ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶಗಳು ಸಿಗಲಿವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts