More

    ಸಿದ್ದಲಿಂಗ ಶ್ರೀಗಳ 61ನೇ ಜನ್ಮವರ್ಧಂತಿ

    ತುಮಕೂರು: ತ್ರಿವಿಧ ದಾಸೋಹದ ಮಹಾಮನೆ ಸಿದ್ಧಗಂಗೆಯ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಿಗೆ ಶನಿವಾರ 61ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು.

    ಶ್ರೀಮಠದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ನೆರವೇರಿದವು. ಮಠದ ಉತ್ತರಾಧಿಕಾರಿಗಳಾದ ಶ್ರೀ ಶಿವ ಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಹರಗುರು ಮಠಾಧೀಶರು ಸಿದ್ದಲಿಂಗ ಶ್ರೀಗಳ ಪಾದಪೂಜೆ ನೆರವೇರಿಸಿದರು. ಶ್ರೀಗಳ ಜನ್ಮವರ್ಧಂತಿ ಹಿನ್ನೆಲೆಯಲ್ಲಿ ವಿವಿಧ ಮಠಾಧೀಶರು, ಭಕ್ತರು ಶ್ರೀಗಳ ಪಾದಪೂಜೆ ನೆರವೇರಿಸಿ ಪುಷ್ಪವೃಷ್ಟಿ ಸುರಿಸಿ ಆಶೀರ್ವಾದ ಪಡೆದು ಭಕ್ತಿ ಸಮರ್ಪಿಸಿದರು.

    ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ: ಪ್ರತಿನಿತ್ಯದಂತೆ ಸಿದ್ದಲಿಂಗ ಶ್ರೀಗಳು ಬೆಳಗಿನ ಜಾವ ಹಳೇ ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದರು. ನಂತರ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಸಂಸದರಾದ ಜಿ.ಎಸ್.ಬಸವರಾಜು, ಅಣ್ಣಾ ಸಾಹೇಬ್ ಜೊಲ್ಲೆ, ಎಸ್.ಶಿವಪ್ರಸಾದ್, ರಾಜಶೇಖರ್ ಸೇರಿ ಅನೇಕ ಗಣ್ಯರು ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಮಠದ ಮಕ್ಕಳು ಸರದಿ ಸಾಲಿನಲ್ಲಿ ನಿಂತು ಆಶೀರ್ವಾದ ಪಡೆದರು. ಬೆಳಗ್ಗೆಯಿಂದಲೇ ಮಠಕ್ಕೆ ಭಕ್ತಾದಿಗಳು ಆಗಮಿಸುತ್ತಿದ್ದು, ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಮಾಡಿ, ನಂತರ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts