ಸಿದ್ದಸಿರಿ ಸಹಕಾರಿಗೆ 11.11 ಕೋಟಿ ರೂ. ನಿವ್ವಳ ಲಾಭ

bjp mla
ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಭಾನುವಾರ ನಡೆದ ಸಿದ್ದಸಿರಿ ಸೌಹಾರ್ದ ಸಹಕಾರಿಯ 17ನೇ ವಾರ್ಷಿಕೋತ್ಸವದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಆಯ್ಕೆಯಾದ ರಾಮನಗೌಡ ಪಾಟೀಲ ಯತ್ನಾಳ ಅವರನ್ನು ಸನ್ಮಾನಿಸಲಾಯಿತು. ಸಿದ್ದಸಿರಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸೌಹಾರ್ದ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ ಇದ್ದರು.
Published on


ವಿಜಯಪುರ: ಸಿಬ್ಬಂದಿ ಹಾಗೂ ಗ್ರಾಹಕರ ಸಹಕಾರದಿಂದ ಸಿದ್ದಸಿರಿ ಸೌಹಾರ್ದ ಸಹಕಾರಿ ರೂ. 2,244 ಕೋಟಿ ರೂ. ಠೇವಣಿ ಹೊಂದಿದ್ದು, 2022-23ನೇ ಸಾಲಿನಲ್ಲಿ ರೂ.11,11,11,111 ನಿವ್ವಳ ಲಾಭ ಗಳಿಸಿದೆ ಎಂದು ಸಿದ್ದಸಿರಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಭಾನುವಾರ ನಡೆದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 17ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ನಂಬರ್-1 ಸೌಹಾರ್ದ ಸ್ಥಾನದಲ್ಲಿರುವ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ, ಸತತ 3ನೇ ವರ್ಷವೂ ಶೇ. 25 ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಹಕಾರಿ ಷೇರು ಬಂಡವಾಳ 33 ಕೋಟಿ ರೂ. ದುಡಿಯುವ ಬಂಡವಾಳ 2319 ಕೋಟಿ ರೂ. ಇದ್ದು, ಠೇವಣಿಗಳು 2,244 ಕೋಟಿ ರೂ, ಸಾಲ ಮುಂಗಡ 1,555 ರೂ. ಕಾಯ್ದಿಟ್ಟ ನಿಧಿ 42 ಕೋಟಿ ರೂ, ನಿಶ್ಚಿತ ಆಸ್ತಿಗಳು 39 ಕೋಟಿ ರೂ, ಹೂಡಿಕೆಗಳು 171 ಕೋಟಿ ರೂ. ಹೊಂದಿದೆ. ರಾಜ್ಯಾದ್ಯಂತ ಸಂಪೂರ್ಣ ಗಣಕೀಕೃತ 154 ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, 14 ಸ್ವಂತ ಕಟ್ಟಡಗಳು, 20 ಖಾಲಿ ನಿವೇಶನ ನಗಳನ್ನು ಹೊಂದಿದೆ. 21,941 ಸದಸ್ಯರು ಇದ್ದಾರೆ ಎಂದು ತಿಳಿಸಿದರು.

ಸಹಕಾರಿ ಲೇವಾದೇವಿ ವ್ಯವಹಾರ ಅಲ್ಲದೆ 3 ಸಿದ್ದಸಿರಿ ಭಾರತೀಯ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರಗಳು, ಜೇವರ್ಗಿಯಲ್ಲಿ ಸಿದ್ದಸಿರಿ ರೈತರ ಉಗ್ರಾಣ, ಸಿದ್ದಸಿರಿ ಇಂಧನ ಕೇಂದ್ರ, ವಿಜಯಪುರ, ಸಿಂದಗಿ, ಬಬಲೇಶ್ವರ, ಬಿಜ್ಜರಗಿ, ಝಳಕಿಯಲ್ಲಿ ಸಿದ್ದಸಿರಿ ಕೃಷಿ ಕೇಂದ್ರಗಳು ಸ್ಥಾಪನೆ. ವಿಜಯಪುರದಲ್ಲಿ 5 ಸಾವಿರ ಮೆಟ್ರಿಕ್ ಟನ್ ಸಾಮಾರ್ಥ್ಯದ ಸಿದ್ದಸಿರಿ ಶೀತಲ ಘಟಕ ಮತ್ತು ಸಂಸ್ಕರಣ ಘಟಕ, 28 ಸಿದ್ದಸಿರಿ ಇ- ಸ್ಟಾಂಪ್ ಕೇಂದ್ರಗಳು, ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ಸಿದ್ದಸಿರಿ ಎಥೆನಾಲ್ ಮತ್ತು ಪವರ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿರಿಯ ನಾಗರಿಕರು, ಸೈನಿಕರು, ಮಾಜಿ ಸೈನಿಕರು, ವಿಧವೆಯರು ಮತ್ತು ದಿವ್ಯಾಂಗ ಠೇವಣಿದಾರರಿಗೆ ಶೇ. 0.5 ಹೆಚ್ಚಿನ ಬಡ್ಡಿದರ ನೀಡಲಾಗುತ್ತದೆ. 6 ವರ್ಷಕ್ಕೆ ಹಣ ದ್ವಿಗುಣ ನೀಡಲಾಗುತ್ತಿದ್ದು, ಹಿರಿಯ ನಾಗರಿಕರಿಗೆ 5 ವರ್ಷ 8 ತಿಂಗಳಿಗೆ ಕೊಡಲಾಗುತ್ತದೆ. ಇದಲ್ಲದೇ, ಸಿದ್ದಸಿರಿ ಲಕ್ಕಿ ಗೋಲ್ಡ್ ಆರ್.ಡಿ ಸ್ಲಿಮ್ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.

ಲಿಂಗೈಕ್ಯರಾದ ಸಿದ್ದೇಶ್ವರ ಶ್ರೀಗಳು, ನಿಧನರಾದ ರಾಜಕೀಯ ಮುಖಂಡರು, ಬ್ಯಾಂಕ್ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಚಂದ್ರಯಾನ-3 ಯಶಸ್ಸಿಗೆ ಬೆನ್ನೆಲುಬಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಹೆಮ್ಮೆಯ ವಿಜ್ಞಾನಿಗಳಿಗೆ ಗೌರವ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕರಾಗಿ ಆಯ್ಕೆಯಾದ ರಾಮನಗೌಡ ಪಾಟೀಲ ಯತ್ನಾಳ ಅವರನ್ನು ಹಾಗೂ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಗೆ ಸನ್ಮಾನಿಸಲಾಯಿತು. ಸಿದ್ದಸಿರಿ ಒಣದ್ರಾಕ್ಷಿ ಬ್ರಾಂಡ್ ಬಿಡುಗಡೆಗೊಳಿಸಲಾಯಿತು.


ಸೌಹಾರ್ದ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ರಮೇಶ ಬಿರಾದಾರ, ವಿಜಯಕುಮಾರ್ ಚವ್ಹಾಣ, ಅಶೋಕಗೌಡ ತೊರವಿ, ಶೈಲಜಾ ಪಾಟೀಲ, ಸೀಮಾ ಕೋರೆ, ಸೋಮಶೇಖರ್ ಬಂಡಿ, ಡಾ.ಬಸನಗೌಡ ಪಾಟೀಲ ನಾಗರಾಳ ಹುಲಿ, ಗಣಪತಿ ಜಾಧವ, ವ್ಯವಸ್ಥಾಪಕ ನಿರ್ದೇಶಕ ಜೋತಿಬಾ ಖಂಡಗಾಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net