More

    ಸಿದ್ಧರಾಮೇಶ್ವರ ಕಾಲೇಜು ವಿದ್ಯಾರ್ಥಿ ಸಾಧನೆ

    ಬೀದರ್: ಇಲ್ಲಿಯ ನೌಬಾದ್‍ನ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವಿದ್ಯಾರ್ಥಿ ಮಾಕಾ ನಾಗೇಶ ಪ್ರಸಕ್ತ ಸಾಲಿನ ಅಖಿಲ ಭಾರತ ಆಯುರ್ವೇದ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯಲ್ಲಿ 19ನೇ ರ್ಯಾಂಕ್ ಗಳಿಸಿ ಗಮನ ಸೆಳೆದಿದ್ದಾರೆ.
    ಕಾಲೇಜಿನಲ್ಲಿ ನೀಡುತ್ತಿರುವ ಗುಣಮಟ್ಟದ ಶಿಕ್ಷಣದ ಫಲವಾಗಿ ವಿದ್ಯಾರ್ಥಿಗಳು ವಿವಿಧ ಪರೀಕ್ಷೆಗಳಲ್ಲಿ ಸಾಧನೆಗೈಯುತ್ತಿದ್ದಾರೆ ಎಂದು ಕಾಲೇಜಿನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಯಲ್ಲಾಲಿಂಗ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ಸ್ ಅಧ್ಯಕ್ಷ ಮುರಳಿಧರ ಎಕಲಾರಕರ್ ನುಡಿದರು.
    ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಪ್ರಾಚಾರ್ಯ ಡಾ. ರೂಪೇಶ ಎಕಲಾರಕರ್, ಪ್ರಾಧ್ಯಾಪಕಿ ಡಾ. ಮಮತಾ ಆರ್. ಎಕಲಾರಕರ್ ಹಾಗೂ ಇತರ ಪ್ರಾಧ್ಯಾಪಕರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಿಂದ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯಲ್ಲಿ 19ನೇ ರ್ಯಾಂಕ್ ಗಳಿಸಲು ಸಾಧ್ಯವಾಗಿದೆ ಎಂದು ಮಾಕಾ ನಾಗೇಶ ತಿಳಿಸಿದರು.
    ಕಾಲೇಜು ಪ್ರಾಚಾರ್ಯ ಡಾ. ರೂಪೇಶ ಎಕಲಾರಕರ್, ಉಪ ಪ್ರಾಚಾರ್ಯ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts