More

    ಸಿರಿಧಾನ್ಯ ಬೆಳೆಯಲು ಹೆಚ್ಚು ಉತ್ತೇಜನ ಕೊಡಿ


    ಯಾದಗಿರಿ: ಕೇಂದ್ರ ಸರಕಾರ ಸಿರಿಧಾನ್ಯಗಳ ಉತ್ಪನ್ನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಕೃಷಿ ಅಧಿಕಾರಿಗಳು ರೈತರಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಸೂಚನೆ ನೀಡಿದರು.


    ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಮಾತನಾಡಿ, ಕಳೆದ ಸಾಲಿನಲ್ಲಿ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಇಲಾಖೆಯಿಂದ 7 ಕೋಟಿ ರೂ.ಜಿಲ್ಲೆಗೆ ಅನುದಾನ ನೀಡಿದೆ. ಆದರೆ, ಬಳಕೆಯಾಗಿದ್ದು ಕೇವಲ 1 ಕೋಟಿ ರೂ.ಮಾತ್ರ. ಹೀಗಾದರೆ ಸರಕಾರ ಮತ್ತೆ ಹೇಗೆ ಹಣ ಕೊಡುತ್ತದೆ. ಸಿರಿಧಾನ್ಯಗಳ ಉತ್ಪನ್ನದಿಂದ ಅನ್ನದಾತರಿಗೆ ಹೆಚ್ಚಿನ ಪ್ರಮಾಣದಲ್ಲಿ ಆದಾಯ ಸಿಗಲಿದೆ. ಈ ಬಗ್ಗೆ ಇಲಾಖೆ ಅಧಿಕಾರಿಗಳು ತಿಳಿವಳಿಕೆ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಪಿಎಂಕೆಎಸ್ವೈ ಯೋಜನೆಯಡಿ ರೈತರು ಕೃಷಿ ಉಪಕರಣಗಳನ್ನು ಪಡೆದುಕೊಳ್ಳಲಿ ಎಂಬ ಕಾರಣದಿಂದ ಜಿಲ್ಲೆಗೆ 20 ಕೋಟಿ ರೂ.ಅನುದಾನ ನೀಡಿದೆ. ಹನಿ ನೀರಾವರಿಗಾಗಿ ಸ್ಪಿಂಕಲರ್ಗಳನ್ನು ಸಬ್ಸಿಡಿ ಆಧಾರದಲ್ಲಿ ನೀಡಲಾಗುತ್ತಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಧ್ಯ ಪ್ರವೇಶಿಸಿ, ಈ ವರ್ಷಕ್ಕೆ 20 ಕೋಟಿ ರೂ.ಗಳ ಕ್ರಿಯಾಯೋಜನೆ ಸಿದ್ಧಪಡಿಸಿದ್ದೀರಾ? ಎಂದು ಪ್ರಶ್ನಿಸಿದರು. ಕೃಷಿ ಇಲಾಖೆಯಲ್ಲಿ ಕೆಲಸ ಸೌಲಭ್ಯಗಳು ರೈತರಿಗೆ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಯಾವ ಆಧಾರದ ಮೇಲೆ ಅಧಿಕಾರಿಗಳು ಕ್ರಿಯಾಯೋಜನೆ ಮಾಡುತ್ತಾರೆ ಎಂಬುದು ಜಿಲ್ಲೆಯ ಸಚಿವ ಹಾಗೂ ಶಾಸಕರ ಗಮನಕ್ಕೆ ತರುತ್ತಿಲ್ಲ ಎಂದರು.

    ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಕೋಲ್ಡ್ ಸ್ಟೋರೇಜ್ ಘಟಕ ಸ್ಥಾಪನೆಗೆ 1.4 ಕೋಟಿ ರೂ.ಸಬ್ಸಿಡಿ ನೀಡಲಾಗುತ್ತದೆ. ಅಲ್ಲದೆ ಕೇಂದ್ರ ಸರಕಾರ 1 ಲಕ್ಷ ಕೋಟಿ ರೂ.ಅನುದಾನವನ್ನು ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಿಸಲು ಮೀಸಲಿಟ್ಟಿದೆ. ಆದರೆ, ಯಾದಗಿರಿ ಜಿಲ್ಲೆಯಲ್ಲಿ ಒಂದೂ ಘಟಕ ಸ್ಥಾಪನೆಯಾಗಿಲ್ಲ ಎಂದು ಹೇಳಿದಾಗ, ರಾಜಾ ಅಮರೇಶ್ವರ ನಾಯಕ್, ನಮ್ಮ ಜಿಲ್ಲೆಯ ಗುಡಗುಂಟಿಯಲ್ಲಿ ಕೋಲ್ಡ್ ಸ್ಟೋರೇಜ್ ಇದೆ. ಅಲ್ಲದೆ, ಖಾಸಗಿ ಘಟಕಗಳು ಸಹ ಇವೆ. ಆದರೆ ಈ ಜಿಲ್ಲೆಯಲ್ಲಿ ಸ್ಟೋರೇಜ್ ಇಲ್ಲ. ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಇಂಥ ಯೋಜನೆಗಳ ಬಗ್ಗೆ ಮಾಹಿತಿಯೇ ಇಲ್ಲ ಎಂದು ಕಿಡಿಕಾರಿದರು.

    ಸಚಿವ ದರ್ಶನಾಪುರ, ನಮ್ಮಲ್ಲಿ ಒಣ ಮೆಣಸಿನಕಾಯಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಕೋಲ್ಡ್ ಸ್ಟೋರೇಜ್ ಘಟಕ ಇದ್ದರೆ, ರೈತರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಈ ಬಗ್ಗೆ ಗಮನ ಹರಿಸುವಂತೆ ಇಲಾಖೆ ಉಪ ನಿದರ್ೇಶಕರಿಗೆ ತಾಕೀತು ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts