More

    ಸುಕಲ್ಪ-ರಾಜ್ಯ ತಾಂತ್ರಿಕ ಉತ್ಸವಕ್ಕೆ ಚಾಲನೆ- ಪಠ್ಯೇತರ ಕ್ರಿಯೆಗಳು ಬುದ್ಧಿಶಕ್ತಿಗೆ ಪೂರಕ-ಡಾ.ವಿನಯ್

    ದಾವಣಗೆರೆ: ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ ಜತೆಗೆ ಪಠ್ಯೇತರ ಕಾರ್ಯಕ್ರಮಗಳಲ್ಲೂ ಭಾಗಿಯಾಗಿ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಮಂಡ್ಯದ ಪಿ ಇಎಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಪ್ರೊ. ಡಾ.ಎಸ್.ವಿನಯ್ ಹೇಳಿದರು.
    ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇನ್‌ಫಾರ್ಮೇಷನ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದಿಂದ, ಎರಡು ದಿನಗಳ ಕಾಲ ನಡೆಯಲಿರುವ ‘ಸುಕಲ್ಪ’ ರಾಜ್ಯಮಟ್ಟದ ತಾಂತ್ರಿಕ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
    ವೃತ್ತಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯವಾಗಿ ಎದುರಿಸಬೇಕು. ಇತ್ತೀಚಿನ ತಂತ್ರಜ್ಞಾನಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದೂ ತಿಳಿಸಿದರು.
    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಬಿ.ಸಂಜಯ್‌ಪಾಂಡೆ ಮಾತನಾಡಿ ಪಠ್ಯೇತರ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿ ಸ್ಪರ್ಧಾ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.
    ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೆಸರು ನೋಂದಾಯಿಸಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.
    ಕಾಲೇಜಿನ ಆಡಳಿತ ಅಧಿಕಾರಿ ವೈ.ಯು.ಸುಭಾಷ್ ಚಂದ್ರ, ವಿಭಾಗದ ಮುಖ್ಯಸ್ಥ ಡಾ.ಬಿ.ಎಸ್. ಸುನಿಲ್ಕುಮಾರ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಟಿ.ಆರ್.ತೇಜಸ್ವಿ ಕಟ್ಟಿಮನಿ, ಕಾರ್ಯಕ್ರಮದ ಸಂಯೋಜಕರಾದ ಡಾ.ಎಸ್. ನೀಲಾಂಬಿಕೆ, ಪ್ರೊ. ಎನ್.ಬಿ. ನಸ್ರೀನ್ ತಾಜ್, ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊ ವೀರಪ್ಪ ಇತರರಿದ್ದರು.
    ———

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts