More

    ಸುಳ್ಳು ಆರೋಪ ಬಿಟ್ಟು ಕ್ಷೇತ್ರ ಅಭಿವೃದ್ಧಿ ಮಾಡಿ

    ಎಚ್.ಡಿ.ಕೋಟೆ: ಕಾಂಗ್ರೆಸ್ ಶಾಸಕರೆಂಬ ಕಾರಣಕ್ಕೆ ನನ್ನ ಮೇಲೆ ಕಳಂಕ ತರುವ ಉದ್ದೇಶದಿಂದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಆರೋಪ ಮಾಡಿದರು.


    ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ಹಿನ್ನೆಲೆಯಲ್ಲಿ ಆಯ್ಕೆಯಾಗಿರುವ ಮನೆಗಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಶಾಸಕರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


    ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ನಾಲ್ಕು ವರ್ಷಗಳು ಕಳೆದರೂ ಇದುವರೆಗೆ ತಾಲೂಕಿನ ಬಡಜನರಿಗೆ ಮನೆ ನೀಡುವ ಕೆಲಸ ಮಾಡಿಲ್ಲ, ಎರಡು-ಮೂರು ತಿಂಗಳಿಂದ ಬಿದ್ದ ಮಳೆಗೆ ಸರಗೂರು ಮತ್ತು ಎಚ್.ಡಿ.ಕೋಟೆ ತಾಲೂಕಿನ ಸಾವಿರಾರು ಮನೆಗಳು ಬಿದ್ದು ಹೋಗಿದ್ದವು. ಅರ್ಹರಿಗೆ ಅನ್ಯಾಯ ಆಗದಂತೆ ಮನೆಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.


    ಸರಗೂರು ತಾಲೂಕಿನಲ್ಲಿ 946 ಮತ್ತು ಕೋಟೆ ತಾಲೂಕಿನ 886 ಜನರಿಗೆ ಮಳೆಯಿಂದ ಹಾನಿಯಾದ ಮನೆಗಳನ್ನು ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ. ಇನ್ನೂ 843 ಅರ್ಜಿಗಳು ಬಾಕಿಯಿದೆ. ತಹಸೀಲ್ದಾರ್ ಕಚೇರಿಯಲ್ಲಿ ಗಲಾಟೆ ನಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮನೆ ಆಯ್ಕೆ ವಿಚಾರಕ್ಕೆ ಪರಿಶೀಲನೆ ನಡೆಸಲು ತಂಡ ರಚಿಸಿ ತನಿಖೆ ನಡೆಸುತ್ತಿದ್ದಾರೆ.


    ತಾಲೂಕಿನ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ನಿಮ್ಮ ಶಾಸಕರೇ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ತನಿಖೆ ನಡೆಸುವಂತೆ ನಾನು ಪತ್ರ ಬರೆದಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವರು ಬಹಿರಂಗ ಪಡಿಸಬೇಕು. ಸಚಿವರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಕ್ಷೇತ್ರದ ಬಡಜನರಿಗೆ ಮನೆ ವಿಚಾರದಲ್ಲಿ ಅನುಕೂಲ ಮಾಡಿಕೊಡಬೇಕು. ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಾದ ಅನುದಾನವನ್ನು ಸಮರ್ಪಕವಾಗಿ ಕೊಟ್ಟು ಹಿಂದುಳಿದ ತಾಲೂಕನ್ನು ಅಭಿವೃದ್ಧಿಪಡಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.


    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಸೀಮಿತವಾಗಿದ್ದ ಅನುದಾನವನ್ನು ಕ್ಷೇತ್ರದಲ್ಲಿ ಕಡಿತಗೊಳಿಸಿ ಮತ್ತೆ ಯಾವುದೋ ಕಾಮಗಾರಿಗಳಿಗೆ ಹಣ ಕೊಟ್ಟಿರುವುದೇ ಇವರ ಸಾಧನೆಯಾಗಿದೆ ಎಂದು ಸಚಿವರ ವಿರುದ್ಧ ಕಿಡಿಕಾರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts