More

    ಸುವರ್ಣ ವಿಧಾನಸೌಧದ ಘನತೆ ಕಾಪಾಡಿ

    ಬೆಳಗಾವಿ: ಸುವರ್ಣ ವಿಧಾನಸೌಧದ ಘನತೆ ಗಮನದಲ್ಲಿಟ್ಟುಕೊಂಡು ಅಲ್ಲಿ ಭದ್ರತೆ, ಸ್ವಚ್ಛತೆ ಸೇರಿ ಒಟ್ಟಾರೆ ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚಸಿದರು.

    ನಗರದ ಹೊರಹೊಲಯದಲ್ಲಿರುವ ಸುವರ್ಣ ವಿಧಾನಸೌಧಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಸುವರ್ಣ ವಿಧಾನಸೌಧದ ನಿರ್ವಹಣೆ ಮಾಡುತ್ತಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕರ ಜತೆ ಚರ್ಚಿಸಿದರು. ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಹಾಗೂ ಸಂಡಿಗೆ ಒಣ ಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು.

    ಸ್ವಚ್ಛತೆ ಸೇರಿದಂತೆ ಮತ್ತಿತರ ದೈನಂದಿನ ನಿರ್ವಹಣೆಯ ಕೆಲಸ ಕಾರ್ಯಗಳಿಗೆ ನಿಯೋಜಿಸಲಾಗುವ ಸಿಬ್ಬಂದಿ ಹಾಗೂ ಕಾರ್ಮಿಕರು ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಭದ್ರತೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಪ್ರತಿಯೊಬ್ಬರನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು ಹಾಗೂ ಗುರುತಿನ ಚೀಟಿ ಪರಿಶೀಲಿಸಿ ಪ್ರವೇಶ ಕಲ್ಪಿಸಬೇಕು. ಯಾವುದೇ ರೀತಿಯ ಕೆಲಸ ಮಾಡುವಾಗ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಸಲಹೆ-ಸೂಚನೆ ಪಾಲಿಸಬೇಕು ಎಂದರು.

    ಅಚಾತುರ್ಯ ಉಂಟಾದರೆ ಅವರನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಸಂಜೀವಕುಮಾರ ಹುಲಕಾಯಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭೀಮಾ ನಾಯ್ಕ ಸೇರಿ ಪೊಲೀಸ್ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts