More

    ಸುವರ್ಣ ಸೌಧಕ್ಕೆ 24 ಕಚೇರಿ ಸ್ಥಳಾಂತರ

    ಬೆಳಗಾವಿ: ನಗರದಲ್ಲಿ ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಕಚೇರಿಗಳು ಹಾಗೂ ನಿಗಮ ಕಚೇರಿಗಳು ಸೇರಿ ಒಟ್ಟು 24 ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

    ಧಾರವಾಡ ನಗರದಲ್ಲಿ ಬಾಡಿಗೆ ಕಟ್ಟಡದಲ್ಲಿರುವ ಜಲಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮದ ಧಾರವಾಡ ವಿಭಾಗೀಯ ಕಚೇರಿ, ಬೆಳಗಾವಿ ಜಿಲ್ಲಾ ಮಟ್ಟದ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ, ಹಿರಿಯ ಭೂ ವಿಜ್ಞಾನ, ಜಿಲ್ಲಾ ಅಂತರ್ಜಲ ಕಚೇರಿ, ಅಂತರ್ಜಲ ನಿರ್ದೇಶನಾಲಯ, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ, ನಗರ ಮತ್ತು ಗ್ರಾಮಾಂತರ ಯೋಜನೆಯ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿ ಸ್ಥಳಾಂತರಗೊಳ್ಳಲಿವೆ.

    ಭೂ ಸ್ವಾಧೀನ ಪುನರ್ವಸತಿ ಮತ್ತು ಪುನರ್ ನಿರ್ವಣ, ಬೃಹತ್ ನೀರಾವರಿ ಯೋಜನೆಗಳ ವಿಶೇಷ ಜಿಲ್ಲಾಧಿಕಾರಿಗಳ ಕಚೇರಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳ ಉಪವಿಭಾಗದ ಸಹಾಯಕ ಆಯುಕ್ತ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಮಾಹಿತಿ ಆಯೋಗ ಆಯುಕ್ತರ ಕಚೇರಿ, ಸಹಕಾರಿ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಜಲ್ಲಾ ಜಂಟಿ ನಿರ್ದೇಶಕ ಕಚೇರಿ, ರಾಜ್ಯ ಕೃಷಿ ಮಾರಾಟ ಮಂಡಳಿ ವಿಭಾಗೀಯ ಕಚೇರಿಯ ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಕಚೇರಿ, ಬೆಳಗಾವಿ ವೃತ್ತದ ವಿದ್ಯುತ್ ಪರಿವೀಕ್ಷಕರ ಕಚೇರಿ, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ ಕಚೇರಿಗಳು ಸ್ಥಳಾಂತರಗೊಳ್ಳಲಿವೆ.

    ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲಾಭಿವೃದ್ಧಿ ನಿಗಮ, ಬೆಳಗಾವಿ ವಿಭಾಗದ ಕೈಮಗ್ಗ ಮತ್ತು ಜವಳಿ ಇಲಾಖೆಯ ಪಶ್ಚಿಮ ವಲಯದ ಜಂಟಿ ನಿರ್ದೇಶಕ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಮತ್ತು ಉಪ ಪ್ರಧಾನ ವ್ಯವಸ್ಥಾಪಕರ ಕಚೇರಿ ಹಾಗೂ ನಿರ್ವಿುತಿ ಕೇಂದ್ರದ ಜಿಲ್ಲಾ ಯೋಜನಾ ನಿರ್ದೇಶಕ ಕಚೇರಿಗಳನ್ನು ಸುವರ್ಣ ಸೌಧಕ್ಕೆ ಸ್ಥಳಾಂತರಗೊಳಿಸಲಾಗಿದೆ.

    ಹೊಸ ಪೀಠೋಪಕರಣ ಖರೀದಿಸುವಂತಿಲ್ಲ: ಜುಲೈ ಮೊದಲ ವಾರದಲ್ಲಿ ಎಲ್ಲ ಕಚೇರಿಗಳ ಸ್ಥಳಾಂತರಗೊಳ್ಳಬೇಕು. ಅಲ್ಲದೆ, ಸ್ಥಳಾಂತರಗೊಳ್ಳುವ ಸಿಬ್ಬಂದಿಗೆ ಸಾರಿಗೆ, ಕುಡಿಯುವ ನೀರು, ಊಟದ ವ್ಯವಸ್ಥೆಗೆ ಕ್ಯಾಂಟೀನ್​ಗಳನ್ನು ಜಿಲ್ಲಾಡಳಿತ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ಹೊಸ ಪೀಠೋಪಕರಣ ಖರೀದಿಸುವಂತಿಲ್ಲ ಎಂದು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನ ಕಾರ್ಯದರ್ಶಿ ರಾಮಕೃಷ್ಣಪ್ಪ ಜಿ.ಎಂ. ಆದೇಶದಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts