More

    ಸುಸಂಸ್ಕೃತ ವಿದ್ಯಾರ್ಥಿಗಳಿಂದ ದೇಶ ಪ್ರಗತಿ ಹೊಂದಲು ಸಾಧ್ಯ

    ದಾಂಡೇಲಿ: ಇಂದು ದೇಶದಲ್ಲಿ ಶಿಕ್ಷಣಕ್ಕೆ ಅತಿ ಹೆಚ್ಚು ಮಹತ್ವ ನೀಡಲಾಗುತ್ತಿದೆ. ದೇಶದ ಪ್ರಗತಿ ಉತ್ತಮ ಶಿಕ್ಷಣ ಪಡೆದು ಸುಸಂಸ್ಕೃತರಾಗಿ ಬೆಳೆಯುವ ವಿದ್ಯಾರ್ಥಿಗಳನ್ನು ಅವಲಂಬಿಸಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

    ನಗರದ ಅಂಬೇವಾಡಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ವಣಗೊಂಡ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯ ಕಟ್ಟಡದ ಉದ್ಘಾಟನೆ ಹಾಗೂ 10 ಕೋಟಿ ವೆಚ್ಚದ ಎರಡನೇ ಹಂತದ ಕಟ್ಟಡ ನಿರ್ವಣಕ್ಕೆ ಅಡಿಗಲ್ಲು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಕ್ಕದಲ್ಲಿ ನಿರ್ವಣಗೊಳ್ಳಲಿರುವ ಹಿಂದುಳಿದ ಮೆಟ್ರಿಕ್ ನಂತರದ 200 ವಿದ್ಯಾರ್ಥಿಗಳ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯದ ಅಡಿಗಲ್ಲು ಕಾರ್ಯ ನೆರವೇರಿಸಿ ಅವರು ಮಾತನಾಡಿದರು. ದಾಂಡೇಲಿ ಮುರಾರ್ಜಿ ವಸತಿ ನಿಲಯ 2005ರಲ್ಲಿ ಬಾಡಿಗೆ ಕಟ್ಟಡದಲ್ಲಿ ಆರಂಭಗೊಂಡಿದ್ದು, ಇದೀಗ ಉದ್ಘಾಟನೆಗೊಂಡ ಸ್ವಂತ ಕಟ್ಟಡದಲ್ಲಿ 250 ಅಲ್ಪಸಂಖ್ಯಾತ ವಿದ್ಯಾಥಿಗಳಿಗೆ ವಸತಿ ಸೌಲಭ್ಯ ಒದಗಿಸಲಾಗುತ್ತದೆ. ಆಡಳಿತ ಕಚೇರಿ, ಅಡುಗೆ ಕೋಣೆ, ಊಟದ ಕೋಣೆ ಕೂಡ ನಿರ್ವಿುಸಲಾಗಿದೆ. ಎರಡನೇ ಹಂತದ ನಿರ್ಮಾಣ ಕಾರ್ಯದಲ್ಲಿ ನಿಲಯದ ಆವರಣದಲ್ಲಿನ ಚರಂಡಿ ವ್ಯವಸ್ಥೆ, ರಸ್ತೆ, ಕಾಂಪೌಂಡ್ ಗೋಡೆ, 8 ಶಿಕ್ಷಕರ ಕ್ವಾರ್ಟರ್ಸ್​ಗಳು ನಿರ್ವಣಗೊಳ್ಳಲಿವೆ ಎಂದು ತಿಳಿಸಿದರು.

    ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ತಂಗಳ, ಜಿಪಂ ಸದಸ್ಯ ಕೃಷ್ಣಾ ಪಾಟೀಲ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ವಿನಾಯಕ ಪಾಟೀಲ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಡಿ. ಒಕ್ಕುಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಎಂ. ಬಡಿಗೇರ, ಉಪನ್ಯಾಸಕ ರಾಮಕೃಷ್ಣ ಗೌಡ, ಮುರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ರಶ್ಮಿ ಗುರವ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts