More

    ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ

    ಯಾದಗಿರಿ: ಸರಕಾರದ ವಿವಿಧ ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆ ಅ.28 ಮತ್ತು 29 ರಂದು ಜರುಗಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪರ್ವಭಾವಿ ಸಭೆಯಲ್ಲಿ ಮಾತನಾಡಿ, ಒಟ್ಟು 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7884 ಅಭ್ಯರ್ಥಿಗಳನ್ನು ಹಾಜರಾಗಲಿದ್ದಾರೆ. ಅಧಿಕಾರಿಗಳು ಸುವ್ಯವಸ್ಥಿತ ಹಾಗೂ ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕು. ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷೆಯ ನಿಯಮಾವಳಿ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿಯ ಮಾಹಿತಿಗಳನ್ನು ಚಿತ್ರೀಕರಿಸುವಂತಿಲ್ಲ. ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇ ಪ್ರದೇಶ ಎಂದು ಘೋಷಿಸಲಾಗುವುದು. ಸುತ್ತಲಿನ ಝಿರಾಕ್ಸ್, ಕಂಪ್ಯೂಟರ್ ಮಳಿಗೆಗಳನ್ನು ಮುಚ್ಚುವಂತೆ ಆದೇಶಿಸಿದರು.

    ಬೆಲ್ ಸಮಯದ ಮಾಹಿತಿಗಳನ್ನು ಕೊಠಡಿ ಮೇಲ್ವಿಚಾರಕರಿಗೆ ತರಬೇತಿಯಲ್ಲಿ ವಿಶೇಷವಾಗಿ ತಿಳಿಸಿಕೊಡುವುದು, ಕರ್ನಾಟಕ ಪರೀಕ್ಷಾ ಪ್ರಾಕಾರಿಗಳ ಸೂಚಿಸಿದಂತೆ ಡ್ರೆಸ್ಕೋಡ್ ಅನ್ನು ಅನುಸರಿಸುವ ಬಗ್ಗೆ ಉಪ ಮುಖ್ಯಅಧೀಕ್ಷಕರು ಖಚಿತ ಪಡಿಸಿಕೊಳ್ಳಬೇಕು. ಜತೆಗೆ ಯಾವುದೇ ತರಹದ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್ಗಳು ತರುವಂತಿಲ್ಲ ಎಂದು ಹೇಳಿದರುಇ.

    ಡಿವೈಎಸ್ಪಿ ಬಸವೇಶ್ವರ ಹೀರಾ, ಪದವಿ ಪೂರ್ವ ಇಲಾಖೆ ಉಪ ನಿದರ್ೇಶಕ ಚನ್ನಬಸಪ್ಪ ಕುಳಗೇರಿ, ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts