More

    ಸೂಕ್ತ ಸಮಯದಲ್ಲಿ ಸ್ಪರ್ಧೆ ನಿರ್ಧಾರ


    ತಿ.ನರಸೀಪುರ: ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಸೂಕ್ತ ಸಮಯದಲ್ಲಿ ನಿರ್ಧಾರವಾಗಲಿದ್ದು, ವರುಣ ದಿಂದ ಸ್ಪರ್ಧಿಸದಿದ್ದರೆ ನಾನು ಪಕ್ಷದ ಅಭ್ಯರ್ಥಿಯಾಗಲಿದ್ದೇನೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

    ವರುಣ ವಿಧಾನ ಸಭಾ ಕ್ಷೇತ್ರದ ಹುನುಗನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾ ಡಿದರು. ಮುಂಬರುವ ಚುನಾವಣೆಯಲ್ಲಿ ವರುಣದಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೋ ಅಥವಾ ನೀವೇ ಸ್ಪರ್ಧೆ ಮಾಡುತ್ತೀರೋ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

    ಮತದಾರರರಲ್ಲಿ ಯಾವುದೇ ಗೊಂದಲವಿಲ್ಲ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದನ್ನು ಅಪ್ಪ ನಿರ್ಧಾರ ಮಾಡಿಲ್ಲ. ಅವರು ತೀರ್ಮಾನ ಮಾಡದ ಹೊರತು ನಾನೇನೂ ಹೇಳಲಾಗುವುದಿಲ್ಲ. ಸೂಕ್ತ ಸಮಯದಲ್ಲಿ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಲ್ಲಯವರೆಗೆ ಶಾಸಕನಾಗಿ ನಾನು ಕ್ಷೇತ್ರದ ಕೆಲಸ ಮಾಡುತ್ತೇನೆ ಎಂದರು.

    ಪಕ್ಷಕ್ಕೆ ಚೈತನ್ಯ ತುಂಬಲಿದ್ದಾರೆ ಖರ್ಗೆ: ನಿಜಲಿಂಗಪ್ಪ ನಂತರ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಮುತ್ಸದಿ ರಾಜಕಾರಣಿ ಹಾಗೂ ಸಮರ್ಥ ನಾಯಕರಾಗಿರುವ ಅವರ ಅಧ್ಯಕ್ಷತೆಯಲ್ಲಿ ಪಕ್ಷ ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಈಗ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗಿರುವುದು ನಿಜ. ಆದರೆ ಖರ್ಗೆ ಅವರು ಅಧ್ಯಕ್ಷರಾಗಿರುವುದರಿಂದ ಪಕ್ಷಕ್ಕೆ ಹೊಸ ಚೈತನ್ಯ ಬಂದಿದೆ .ಅವರ ಅಧ್ಯಕ್ಷತೆಯಲ್ಲಿ ಪಕ್ಷ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts