

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಿದ್ದು, ಅದಕ್ಕಾಗಿ ಸೆ.1ರಂದು ಮಧ್ಯಾಹ್ನ 2ರಿಂದ ರಾತ್ರಿ 8.30ರವರೆಗೆ ಸಾರ್ವಜನಿಕರಿಗೆ ತಾವರೆಕಟ್ಟೆ ಕಡೆಯಿಂದ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯವನ್ನು ಬೆಳಗ್ಗೆ 7.30 ರಿಂದ ಮಧ್ಯಾಹ್ನ 2ರವರೆಗೆ ಹಾಗೂ ರಾತ್ರಿ 8.30 ರ ನಂತರ ಸಾರ್ವಜನಿಕರಿಗೆ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದ್ದು,
ಭಕ್ತಾದಿಗಳು ಸಹಕರಿಸಬೇಕು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.