More

    ಸೇವಾದಳದಿಂದ ರಾಷ್ಟ್ರೀಯ ಭಾವೈಕ್ಯತೆ ಪ್ರತಿಪಾದನೆ

    ಸಾಗರ: ಭಾರತ ಸೇವಾದಳವು ರಾಷ್ಟ್ರೀಯ ಭಾವೈಕ್ಯತೆಯನ್ನು ಪ್ರತಿಪಾದಿಸಿ, ಮಕ್ಕಳಲ್ಲಿ ದೇಶದ ಮಹತ್ವ ಪರಿಚಯಿಸುತ್ತ ಬಂದಿದೆ ಎಂದು ಸೇವಾದಳದ ತಾಲೂಕು ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು ಹೇಳಿದರು.
    ಬೆಳಲಮಕ್ಕಿ ಶಾಲೆಯಲ್ಲಿ ಗುರುವಾರ ಭಾರತ ಸೇವಾದಳದಿಂದ ತರಬೇತಿ ಪಡೆದ ಶಿಕ್ಷಕರಿಗೆ ಶಾಖಾ ನೋಂದಣಿ ಮತ್ತು ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನಾದ್ಯಂತ ಸೇವಾದಳವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲ ಭಾಗದಲ್ಲೂ ಸಭೆ ನಡೆಸಲಾಗುತ್ತಿದೆ. ಸೇವಾದಳದಲ್ಲಿ ಶಿಕ್ಷಕರಿಗೆ ತರಬೇತಿ ನೀಡಿ ಅವರ ಮೂಲಕ ಮಕ್ಕಳಿಗೆ ಸೇವಾದಳ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಫೆಬ್ರವರಿ ತಿಂಗಳಿನಲ್ಲಿ ಮಕ್ಕಳ ಜಾಥಾ ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಜಾಥಾ ಕುರಿತು ಪೂರ್ವಭಾವಿಯಾಗಿ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ, ಶಿಕ್ಷಕರಿಗೆ ಮಾಹಿತಿ ನೀಡಲಾಗಿದೆ. ಮಕ್ಕಳಲ್ಲಿ ರಾಷ್ಟ್ರೀಯ ಮನೋಭಾವದ ಪರಿಕಲ್ಪನೆ ಮೂಡಿಸುವಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ನಮ್ಮ ಸಂಘಟನೆ ನಡೆಸುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts