More

    ಸೇವಾ ಭದ್ರತೆಗೆ ಪೌರಕಾರ್ಮಿಕರ ಪಟ್ಟು

    ಚಿತ್ರದುರ್ಗ: ಸೇವೆ ಕಾಯಂ ಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
    ನಗರಪಾಲಿಕೆ, ನಗರಸಭೆ, ಪುರಸಭೆ, ಪಪಂಗಳ ನೇರ ಪಾವತಿ ಪೌರ ಕಾರ್ಮಿಕರು, ಲೋಡರ್ಸ್‌, ಆಟೋ ಮತ್ತು ಟಿಪ್ಪರ್ ವಾಹನ ಚಾಲಕರು ಮತ್ತು ಸಹಾಯಕರು ಪಾಲ್ಗೊಂಡಿದ್ದರು.
    ಸೇವೆಯನ್ನು ಕಾಯಂ ಗೊಳಿಸಿ ವಸತಿ ಸೌಲಭ್ಯ ಒದಗಿಸಬೇಕು. ಆಯಾ ನಗರ ವ್ಯಾಪ್ತಿ ಜನಸಂಖ್ಯೆಗೆ ಅನುಗುಣವಾಗಿ 500 ಜನರಿಗೆ ಒಬ್ಬರಂತೆ ಪೌರಕಾರ್ಮಿಕರನ್ನು ನೇಮಿಸಬೇಕು. ನೇರ ಪಾವತಿ ಸ್ವಚ್ಛತಾ ಕಾರ್ಮಿಕರು ನಿಧನ ಹೊಂದಿದರೆ ಅವರ ಅವಲಂಬಿತರಿಗೆ ಉದ್ಯೋಗ ಮತ್ತು ಪುನರ್ವಸತಿ ಒದಗಿಸಬೇಕು ಎಂದು ಆಗ್ರಹಿಸಿದರು.
    ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು, 2022 ಜುಲೈ 1ರಂದು, ನೇರಪಾವತಿ ಎಲ್ಲ ಕಾರ್ಮಿಕರ ಸೇವೆ ಕಾಯಂ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದರು. 2018ರ ತಮ್ಮ ಅಧಿಕಾರಾವಧಿ ಸಿಎಂ ಸಿದ್ದರಾಮಯ್ಯ ಅವರು, ಕಾರ್ಮಿಕರ ಸೇವೆ ಕಾಯಂ ಗೊಳಿಸುವುದಾಗಿ ಹೇಳಿದ್ದರು.
    ಬೆಳಗಾವಿ ಅಧಿವೇಶನದಲ್ಲಿ ಬೇಡಿಕೆ ಈಡೇರಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಸ್ವಚ್ಛತಾ ಕಾರ‌್ಯವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.
    ಜಿಲ್ಲಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಡಿ.ದುರುಗೇಶ್, ಉಪಾಧ್ಯಕ್ಷ ಎಸ್.ಜಗದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಜಣ್ಣ, ಸಹಕಾರ‌್ಯದರ್ಶಿ ಟಿ.ಮಂಜಣ್ಣ, ಕಾರ್ಯಕಾರಿ ಸಮಿತಿ ಸದಸ್ಯ ಆರ್.ರಂಗಪ್ಪ, ವಾಹನ ಚಾಲಕರ ಸಂಘದ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಇತರರು ಇದ್ದರು.
    ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪೌರಕಾರ್ಮಿಕರ ಮಹಾಸಂಘ, ಸಫಾಯಿ ಕರ್ಮಚಾರಿ ಕಾವಲು ಸಮಿತಿ-ಕರ್ನಾಟಕ ಹಾಗೂ ಚಿತ್ರದುರ್ಗ ಜಿಲ್ಲಾ ಪೌರಕಾರ್ಮಿಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts