More

    ಸೇವೆ ಕಾಯಂಗೆ ಆಗ್ರಹಿಸಿ ಪಂಜಿನ ಮೆರವಣಿಗೆ

    ಚಿತ್ರದುರ್ಗ: ತಮಟೆ ಸದ್ದಿನೊಂದಿಗೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅನೇಕ ಅತಿಥಿ ಉಪನ್ಯಾಸಕರು ಬುಧವಾರವೂ ಮುಂದುವರೆಸಿದ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಸರ್ಕಾರದ ನಡೆಯ ವಿರುದ್ಧ ಬೇಸರ ವ್ಯಕ್ತಪಡಿಸಿದರು.

    ಒನಕೆ ಓಬವ್ವ ವೃತ್ತದಿಂದ ಆರಂಭವಾದ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಮಹಾತ್ಮಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಸ್ಪಂದನೆ ಸಿಗುವವರೆಗೂ ಹೋರಾಟ ನಿಲ್ಲದು. ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಜಿ.ಎನ್.ಯಶೋಧರ, ಪದಾಧಿಕಾರಿಗಳಾದ ವಿ.ಎಸ್.ಮಂಜುನಾಥ, ಜಗದೀಶ್, ಗುರುಸ್ವಾಮಿ, ದಾಕ್ಷಾಯಿಣಿ, ನಂದಿನಿ, ಎಚ್.ಮಧು, ಆಶಾ, ದಯಾನಂದ ಸೇರಿ 250ಕ್ಕೂ ಹೆಚ್ಚು ಉಪನ್ಯಾಸಕರು ಪಾಲ್ಗೊಂಡಿದ್ದರು.

    ರಾಷ್ಟ್ರೀಯ ಕಿಸಾನ್ ಸಂಘದ ಪದಾಧಿಕಾರಿಗಳು ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ನೀಡಿ, ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರ ಮೂಲಕ ಮನವಿ ರವಾನಿಸಿದರು. ಸಂಘದ ರಾಜ್ಯ ಕಾರ್ಯದರ್ಶಿ ಕೊಂಚೆ ಶಿವರುದ್ರಪ್ಪ, ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts