More

    ಸೈಬರ್ ಕ್ರೈಮ್ ಪತ್ತೆಗೆ ಪರಿಣಿತರ ತಂಡ: ಗೃಹ ಸಚಿವ ಆರಗ ಜ್ಞಾನೇಂದ್ರ

    ಭದ್ರಾವತಿ: ಪ್ರಸ್ತುತ ಸೈಬರ್ ಕ್ರೈಮ್‌ಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇದಕ್ಕೆ ಪರಿಣಿತರ ತಂಡವನ್ನು ತಯಾರು ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
    ನಗರದ ಮಿಲಿಟರಿ ಕ್ಯಾಂಪ್ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಕಟ್ಟಡವನ್ನು ಉದ್ಘಾಟಿಸಿದ ಅವರು, ಮಹಿಳಾ ಪೊಲೀಸ್ ಠಾಣೆಯನ್ನು ತೆರೆಯುವ ಮೂಲಕ ನೊಂದ ಮಹಿಳೆಯರಿಗೆ ನ್ಯಾಯ ಸಿಗುವಂತೆ ಮಾಡಲಾಗುವುದು. ಪ್ರತಿ ಪೊಲೀಸ್ ಠಾಣೆಯಲ್ಲಿ ಕನಿಷ್ಠ 3 ಮಹಿಳಾ ಪೊಲೀಸ್ ಸಿಬ್ಬಂದಿ ಕಾರ್ಯ ನಿರ್ವಹಿಸುವಂತೆ ಮಾಡಲಾಗಿದೆ ಎಂದರು.
    ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣವನ್ನು ನಿರ್ಮಾಣ ಮಾಡಲು ಸರ್ಕಾರ ಕಟಿಬದ್ಧವಾಗಿದ್ದು, ಅದಕ್ಕೆ ತಕ್ಕಂತೆ ಪೊಲೀಸ್ ಇಲಾಖೆಯನ್ನು ಆಧುನೀಕರಣಗೊಳಿಸಲಾಗುತ್ತಿದೆ. ಪ್ರಸ್ತುತ 200 ಕೋಟಿ ರೂ.ವೆಚ್ಚದಲ್ಲಿ 217 ಹೊಸ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿ ಉದ್ಘಾಟನೆ ಮಾಡಲಾಗಿದೆ. ಇದಕ್ಕೆ ಪೂರಕವಾಗಿ ಪೊಲೀಸರ ವಸತಿ ಗೃಹಗಳನ್ನು ನಿರ್ಮಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬದ ಕಡೆ ಗಮನಹರಿಸುವುದರ ಜತೆಗೆ ನೆಮ್ಮದಿಯಿಂದ ಕರ್ತವ್ಯವನ್ನು ಮಾಡುವಂತಹ ವಾತಾವರಣವನ್ನು ನಿರ್ಮಿಸಲಾಗುತ್ತಿದೆ ಎಂದರು.
    ಭದ್ರಾವತಿಯಲ್ಲಿ 2.10 ಕೋಟಿ ರೂ. ವೆಚ್ಚದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ನಿರ್ಮಾಣ ಮಾಡಿದ್ದು 1.50 ಕೋಟಿ ರೂ. ವೆಚ್ಚದಲ್ಲಿ ಹೊಸಮನೆ ಪೊಲೀಸ್ ಠಾಣೆ ಕಟ್ಟಡ ಹಾಗೂ 4.50 ಕೋಟಿ ರೂ. ವೆಚ್ಚದಲ್ಲಿ 12 ಪೊಲೀಸ್ ವಸತಿ ಗೃಹಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು. ಒಟ್ಟು 8.10 ಕೋಟಿ ರೂ ವೆಚ್ಚದ ಕಾಮಗಾರಿ ನಡೆಯಲಿದೆ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು ಇದನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts