More

    ಸೊನ್ನ ಬ್ಯಾರೇಜ್ಗೆ ಮಹಾ ನೀರು


    ಅಫಜಲಪುರ: ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದ್ದು, ಸೋಮವಾರ ಬ್ಯಾರೇಜಿನಿಂದ 2500 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಹರಿಸಲಾಗಿದೆ ಎಂದು ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತರ ಅಶೋಕ ಕಲಾಲ್ ತಿಳಿಸಿದ್ದಾರೆ.
    ಸೊನ್ನ ಬ್ಯಾರೇಜ್ಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಬ್ಯಾರೇಜ್ 3.166 ಟಿಎಂಸಿ ಸಂಗ್ರಹ ಸಾಮಥ್ರ್ಯ ಹೊಂದಿದ್ದು, ಸದ್ಯ 2.2 ಟಿಎಂಸಿ ನೀರು ಸಂಗ್ರಹವಿದೆ. ಇಲ್ಲಿವರೆಗೂ ಉಜನಿ, ವೀರ ಡ್ಯಾಮ್ಗಳಿಂದ ನೀರು ಬಂದಿಲ್ಲ, ಕೇವಲ ಮಹಾರಾಷ್ಟ್ರದಲ್ಲಿ ಅಲ್ಲಲ್ಲಿ ಮಳೆಯಾಗಿದ್ದರಿಂದ ನೀರು ಬಂದಿದೆ ಎಂದು ಹೇಳಿದರು.
    ಜುಲೈ ಮತ್ತು ಆಗಸ್ಟ್ನಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದ್ದು, ಆಗ ನೀರಿನ ಒಳಹರಿವು ಇನ್ನು ಹೆಚ್ಚಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು 2500 ಕ್ಯೂಸೆಕ್ಸ್ ನೀರು ನದಿಗೆ ಹರಿಸಲಾಗಿದೆ. 3.5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸಾಮಥ್ರ್ಯವಿರುವ ಮೂರು ಘಟಕಗಳ ಪೈಕಿ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯನ್ನೂ ಮಾಡಲಾಗುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts