More

    ಸೊರಬ: ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಿ; ತಾಲೂಕು ಕಚೇರಿ ಎದುರು ಬಸ್ತಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ

    ಸೊರಬ: ತಾಲೂಕಿನ ಬಸ್ತಿಕೊಪ್ಪ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ತಾಲೂಕು ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಉಪ ತಹಸೀಲ್ದಾರ್ ನಾಗರಾಜ್‌ಗೆ ಮನವಿ ಸಲ್ಲಿಸಿದರು.
    ಕಲ್ಲು ಗಣಿಗಾರಿಕೆಯಿಂದಾಗಿ ಗ್ರಾಮಸ್ಥರು ನಲುಗಿ ಹೋಗಿದ್ದಾರೆ. ನಿತ್ಯ ನೂರಾರು ಲಾರಿಗಳು ಸಂಚರಿಸುತ್ತಿದ್ದು, ರಸ್ತೆಗಳು ಹಾಳಾಗಿವೆ. ಗಣಿಗಾರಿಕೆ ಜಾಗದಲ್ಲಿ ಸ್ಫೋಟಿಸಿದಾಗ ಭೂಮಿ ಕಂಪಿಸುತ್ತದೆ. ಇದರಿಂದ ಮನೆಗಳ ಗೋಡೆಗಳು ಬಿರುಕುಬಿಟ್ಟಿವೆ. ಗ್ರಾಮಸ್ಥರು ಜೀವ ಭಯದಲ್ಲಿ ಜೀವನ ಸಾಗಿಸುವಂತಾಗಿದೆ. ಅರಣ್ಯ ಭೂಮಿಯು ನಾಶವಾಗುತ್ತಿದೆ. ಕಾಡು ಪ್ರಾಣಿಗಳು ಗ್ರಾಮದತ್ತ ವಲಸೆ ಬರುತ್ತಿವೆ. ಕೂಡಲೇ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಬೇಕು. ಬಸ್ತಿಕೊಪ್ಪದಲ್ಲಿ ಗ್ರಾಮಸ್ಥರ ವಿರೋಧದ ನಡುವೆಯೂ ಪುನಃ ಹೊಸದಾಗಿ ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಗ್ರಾಮವನ್ನೇ ನಾಶ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
    ಆ್ಯಂಬುಲೆನ್ಸ್ ಸಹ ಬರೋಕ್ಕಾಗಲ್ಲ: ಕಲ್ಲು ಗಣಿಗಾರಿಕೆಯಿಂದ ರಸ್ತೆಗಳು ಹಾಳಾಗಿದ್ದು, ತುರ್ತು ಸ್ಥಿತಿಯಲ್ಲಿ ಆಂಬುಲೆನ್ಸ್ ಸಹ ಗ್ರಾಮಕ್ಕೆ ಬಾರದಂತಾಗಿದೆ. ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥ ನೂರ್ ಅಹಮದ್ ದೂರಿದರು. ಧೂಳಿನಿಂದ ಕುಡಿಯುವ ನೀರು ಕಲುಷಿತವಾಗುತ್ತಿದೆ. ಸ್ಫೋಟದ ತೀವ್ರತೆಗೆ ಶಾಲಾ ಕೊಠಡಿಗಳು ಬಿರುಕುಬಿಟ್ಟಿವೆ. ಮಕ್ಕಳು ಭಯದಲ್ಲಿಯೇ ಶಾಲೆಗೆ ತೆರಳುವಂತಾಗಿದೆ. ಕೂಡಲೇ ಕಲ್ಲು ಗಣಿಗಾರಿಕೆ ಸ್ಥಗಿತ ಮಾಡಬೇಕು. ಇಲ್ಲವಾದಲ್ಲಿ ವಿವಿಧ ಹಂತದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts