More

    ಸೊರಬ: ಕೆರೆಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಮೃತೋತ್ಸವದ ಸಂಭ್ರಮ; ಸ್ಮರಣ ಸಂಚಿಕೆ ಬಿಡುಗಡೆ

    ಸೊರಬ: ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಬೋಧನಾ ಗುಣಮಟ್ಟ ಉತ್ತಮವಾಗಿದ್ದರೆ ಗ್ರಾಮ ಶೈಕ್ಷಣಿಕವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ (ಆಡಳಿತ) ಹೇಳಿದರು.
    ಮಂಗಳವಾರ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಮತ್ತು ನನ್ನ ಶಾಲೆ ನನ್ನ ಕೊಡುಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ಧಾರೆಯೆರೆದ ಗ್ರಾಮದ ಸರ್ಕಾರಿ ಶಾಲೆ ಅಮೃತ ಮಹೋತ್ಸವ ಸಂಭ್ರಮದಲ್ಲಿರುವುದು ಶ್ಲಾಘನೀಯ ಎಂದರು.
    ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು. ಈ ದಿಸೆಯಲ್ಲಿ ಗುರುಗಳು ಹಾಗೂ ಪಾಲಕರ ಮೇಲೆ ಮಹತ್ತರ ಜವಾಬ್ದಾರಿ ಇರುತ್ತದೆ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಅವರ ಮೇಲಿದೆ. ಸರ್ಕಾರ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕಲಿಕೆ ಗುಣಮಟ್ಟ ಹೆಚ್ಚಿಸಲು ಅನೇಕ ಸೌಲಭ್ಯ ಕಲ್ಪಿಸುತ್ತಿದೆ. ಈ ಮೂಲಕ ಅನೇಕ ಯೋಜನೆಗಳನ್ನು ರೂಪಿಸಿದೆ ಎಂದು ತಿಳಿಸಿದರು.
    ಕಂಪ್ಯೂಟರ್, ಗ್ರಂಥಾಲಯ, ಕ್ರೀಡಾ ಚಟುವಟಿಕೆ, ಸಾಂಸ್ಕೃತಿಕ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿದೆ. ಸರ್ಕಾರ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿಸಲು ಹಲವು ಕಾರ್ಯಕ್ರಮ ರೂಪಿಸುತ್ತಿದೆ. ಗ್ರಾಮಸ್ಥರು ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಓದಿಸಬೇಕು. ಈ ಮೂಲಕ ಅವುಗಳ ಬೆಳವಣಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
    ಗ್ರಾಮದಲ್ಲಿ ವಿವಿಧ ಕಲಾತಂಡಗಳ ಮೆರವಣಿಗೆಗೆ ಉದ್ಯಮಿ ವೆಂಕಟೇಶ್ ವೈಕುಂಠ ಕಾಮತ್ ಚಾಲನೆ ನೀಡಿದರು. ಗ್ರಾಮದ ನಿವೃತ್ತ ಶಿಕ್ಷಕ ಹಾಗೂ ಶತಾಯುಷಿ ಚನ್ನಮಲ್ಲಯ್ಯ ಧ್ವಜಾರೋಹಣ ನೆರವೇರಿಸಿದರು. ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts