More

    ಸೋಂಕಿನಿಂದ 95 ಜನ ಗುಣ, ಬಿಡುಗಡೆ

    ಹಾವೇರಿ: ವೈದ್ಯ, ಲ್ಯಾಬ್ ಟೆಕ್ನಿಷಿಯನ್, ಬ್ಯಾಂಕ್, ಪೊಲೀಸ್ ಸಿಬ್ಬಂದಿ ಸೇರಿ ಜಿಲ್ಲೆಯಲ್ಲಿ ಭಾನುವಾರ 76 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, 95 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 2486 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ 1628 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಆ. 16ರಂದು ಇಬ್ಬರು ಮರಣ ಪ್ರಕರಣ ಸೇರಿ ಒಟ್ಟಾರೆ 52 ಜನರು ಕೋವಿಡ್​ನಿಂದ ಮೃತಪಟ್ಟಿದ್ದಾರೆ. 384 ಸೋಂಕಿತರು ಹೋಂ ಐಸೋಲೇಷನ್​ನಲ್ಲಿ ಹಾಗೂ 419 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಒಟ್ಟಾರೆ 803 ಸಕ್ರಿಯ ಪ್ರಕರಣಗಳಿವೆ.

    ಆ.16 ರಂದು ಹಾನಗಲ್ಲ -08, ಸವಣೂರ-05, ಬ್ಯಾಡಗಿ-01, ಹಿರೇಕೆರೂರ-10, ಶಿಗ್ಗಾಂವಿ-11, ರಾಣೆಬೆನ್ನೂರ-27 ಹಾಗೂ ಹಾವೇರಿ ತಾಲೂಕಿನಲ್ಲಿ 14 ಜನರಿಗೆ ಸೋಂಕು ದೃಢಪಟ್ಟಿದೆ. ಸವಣೂರ-04, ಶಿಗ್ಗಾಂವಿ-7, ರಾಣೆಬೆನ್ನೂರ-34, ಹಾವೇರಿ-20, ಬ್ಯಾಡಗಿ-07, ಹಾನಗಲ್ಲ-03, ಹಿರೇಕೆರೂರ-20 ಸೇರಿ ಒಟ್ಟು 95 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

    ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ಕಂಟೈನ್​ವೆುಂಟ್ ಜೋನ್ ಹಾಗೂ ಬಫರ್ ಜೋನ್ ಆಗಿ ಘೊಷಿಸಲಾಗಿದೆ. ಆಯಾ ತಹಸೀಲ್ದಾರ್​ಗಳನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಿಸಲಾಗಿದೆ.

    ಇಬ್ಬರು ಸಾವು: ಹಿರೇಕೆರೂರ ತಾಲೂಕಿನ ಮೇದೂರು ಗ್ರಾಮದ 56 ವರ್ಷದ ಪುರುಷ (ಪಿ-220053) ತೀವ್ರ ಉಸಿರಾಟದ ತೊಂದರೆಯಿಂದ ಆ. 14ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ರ್ಯಾಪಿಡ್ ಆಂಟಿಜನ್ ಕಿಟ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅಂದೇ ಮೃತಪಟ್ಟಿದ್ದಾರೆ. ರಾಣೆಬೆನ್ನೂರಿನ ಹರಳಯ್ಯ ನಗರದ 65 ವರ್ಷದ ಮಹಿಳೆ (ಪಿ-214777) ತೀವ್ರ ಉಸಿರಾಟದ ತೊಂದರೆಯಿಂದ ಆ. 13 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರನ್ನು ರ್ಯಾಪಿಡ್ ಆಂಟಿಜನ್ ಟೆಸ್ಟ್​ಗೆ ಒಳಪಡಿಸಿದ್ದು ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿತ್ತು. ಆ. 14ರಂದು ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts