More

    ಸೋಂಕು ತಡೆಗೆ ಅಗತ್ಯ ಸಹಕಾರ

    ಚನ್ನಮ್ಮ ಕಿತ್ತೂರ: ಗ್ರಾಮೀಣ ಮಟ್ಟದಲ್ಲಿ ಕರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವುದು ಬೇಸರದ ವಿಚಾರ. ಜನರು ಧೈರ್ಯದಿಂದ ಲಸಿಕೆ ಪಡೆದು ಸೋಂಕು ತಡೆಗೆ ಸಹಕಾರ ನೀಡಬೇಕು ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.

    ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಬುಧವಾರ ಉದ್ಘಾಟಿಸಿ ಮಾತನಾಡಿ, ಈ ಆಸ್ಪತ್ರೆಯನ್ನು ಕರೊನಾ ರೋಗಿಗಳಿಗೆ 20 ಆಕ್ಸಿಜನ್ ಬೇಡ್ ವ್ಯವಸ್ಥೆ ಮಾಡಲಾಗಿದೆ. ಶಕುಂತಲಾ ಗಡಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

    ಡಿಸಿ ಎಂ.ಜಿ.ಹಿರೇಮಠ ಮಾತನಾಡಿ, ಕರೊನಾ ನಿಯಂತ್ರಣಕ್ಕೆ ಪ್ರತಿ ಗ್ರಾಪಂಗೆ ಅಗತ್ಯ ಉಪಕರಣ, ಔಷಧ ವಿತರಣೆ ಮಾಡುತ್ತಿದ್ದೇವೆ ಎಂದರು. ಎಸಿ ಶಶಿಧರ ಬಗಲಿ, ತಹಸೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಪ್ರೊಬೇಷನರಿ ತಹಸೀಲ್ದಾರ್ ಮಹೇಶ ಪತ್ರಿ, ತಾಲೂಕು ವೈದ್ಯಾಧಿಕಾರಿಗಳಾದ ಡಾ.ಶಿವಾನಂದ ಮಾಸ್ತಿಹೊಳಿ, ಡಾ.ಎಸ್.ಎಸ್.ಸಿದ್ದಣ್ಣವರ, ಮಂಡಳ ಅಧ್ಯಕ್ಷ ಡಾ.ಬಸವರಾಜ ಪರವಣ್ಣವರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಪಪಂ ಅಧ್ಯಕ್ಷ ಹನುಮಂತ ಲಂಗೋಟಿ ಇದ್ದರು.

    ನೇಸರಗಿ ವರದಿ: ಕರೊನಾ ವೇಗವಾಗಿ ಹರಡುತ್ತಿರುವುದರಿಂದ ಎಲ್ಲರೂ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಡಿಸಿ ಹಿರೇಮಠ ಹೇಳಿದ್ದಾರೆ.

    ಸಮೀಪದ ನಾಗನೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಕಿತ್ತೂರು ಹಾಗೂ ನಾಗನೂರ ಗ್ರಾಮದಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ್ದು, ಹೋ ಐಸೋಲೇಷನ್‌ನಲ್ಲಿರುವವರಿಗೆ ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಿದ್ದಣ್ಣವರ, ನಾಗನೂರ ಸಮುದಾಯ ಕೇಂದ್ರದಲ್ಲಿ ಕೋವಿಡ್ ಕೇರ್ ಪ್ರಾರಂಭಿಸುವುದರಿಂದ ಸುತ್ತಮುತ್ತಲಿನ ಗ್ರಾಮದ ಜನರಿಗೆ ನೆರವಾಗಲಿದೆ ಎಂದರು. ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಕೋವಿಡ್ ಕೇರ್ 20 ಹಾಸಿಗೆಯುಳ್ಳ ಕೇಂದ್ರವಾಗಿದ್ದು, ಅದರಲ್ಲಿ ಆಕ್ಸಿಜನ್ ಸಹಿತ 15 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಕರೊನಾ ದೃಢಪಟ್ಟ ವ್ಯಕ್ತಿಗಳು ಹೋಂ ಕ್ವಾರಂಟೈನ್ ಆಗುವುದರಿಂದ ಮನೆಯ ಜನರಿಗೆಲ್ಲ ಹರಡುವ ಭೀತಿ ತಡೆಯಲು ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ ಎಂದರು. ತಹಸೀಲ್ದಾರ್ ಬಸವರಾಜ ನಾಗರಾಳ, ವೈ.ಎಲ್.ಶೀಗಿಹಳ್ಳಿ, ಡಾ.ರೇಶ್ಮಾ ಕಮತೆ, ಡಾ.ಬಿ.ಐ.ಕುಂದರನಾಡ, ಎ್ಡಿಎ ಬಿ.ಎಸ್.ಪಾಟೀಲ, ಆನಂದ ಇದ್ದರು.

    ವಿಜಯವಾಣಿ ವರದಿಗೆ ಮೆಚ್ಚುಗೆ

    ಕಿತ್ತೂರಿನಲ್ಲಿ ಆಕ್ಸಿಜನ್, ಬೆಡ್ ಕೊರತೆಯಿಂದ ನಿತ್ಯ ರೋಗಿಗಳ ಪರದಾಡುತ್ತಿರುವ ಕುರಿತು ಮೇ 17ರಂದು ವಿಜಯವಾಣಿಯಲ್ಲಿ ವರದಿ ಪ್ರಕಟಿಸಲಾಗಿತ್ತು. ವರದಿಗೆ ಶಾಸಕ ಮಹಾಂತೇಶ ದೊಡಗೌಡರ ಸ್ಪಂದಿಸಿ ಸರ್ಕಾರದ ಮೇಲೆ ಒತ್ತಡ ತಂದು ರೋಗಿಗಳಿಗೆ ಅವಶ್ಯವಿರುವ 20 ಆಕ್ಸಿಜನ್, ಬೆಡ್ ಸೇರಿ ಅಗತ್ಯ ಔಷದ ವ್ಯವಸ್ಥೆ ಕಲ್ಪಿಸಿದ್ದಾರೆ. ಅಗತ್ಯ ಬಿದ್ದರೆ ಹೆಚ್ಚಿನ ಬೆಡ್ ವ್ಯವಸ್ಥೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts