More

    ಸೋಂಕು ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸಿ

    ಚಿಕ್ಕಬಳ್ಳಾಪುರ: ಕರೊನಾ ಸೋಂಕನ್ನು ಗಂಭೀರವಾಗಿ ಪರಿಗಣಿಸಿ, ಹರಡುವಿಕೆಗೆ ಕಡಿವಾಣ ಹಾಕಬೇಕಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ಸಲಹೆ ನೀಡಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ರಾಜ್ಯ ಅಧ್ಯಯನ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಕರೊನಾ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಡೀ ಜಗತ್ತನ್ನು ಕರೊನಾ ಕಾಡುತ್ತಿದೆ. ಈ ಸವಾಲನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದರು.

    ಸೋಂಕು ಹರಡುವಿಗೆ ತಡೆಗೆ ಮುಂಜಾಗ್ರತಾ ನಿಯಮಗಳನ್ನು ಪಾಲಿಸುವುದು, ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಚಿಕಿತ್ಸೆ ಪಡೆಯುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆಯಿತ್ತರು.

    ಸೋಂಕು ತ್ವರಿತ ಪತ್ತೆ, ಹೆಚ್ಚಿನ ಪರೀಕ್ಷೆ ಮತ್ತು ಸೂಕ್ತ ಚಿಕಿತ್ಸೆಯಲ್ಲಿ ರಾಜ್ಯದಲ್ಲೆ ಜಿಲ್ಲೆ ಮುಂದಿದೆ, ಪಂಚಾಯಿತಿವಾರು ಮತ್ತು ನಗರ, ಪಟ್ಟಣಗಳಲ್ಲಿ ವಾರ್ಡ್‌ವಾರು ಟಾಸ್ಕ್ ಫೋರ್ಸ್ ಕಮಿಟಿ ರಚಿಸಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ರೋಗದ ಲಕ್ಷಣ ಮತ್ತು ಲಕ್ಷಣರಹಿತ ಸೋಂಕಿತರ ಚಿಕಿತ್ಸೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

    ಲಾಕ್‌ಡೌನ್ ಅವಧಿಯಲ್ಲಿ ರೆಡ್‌ಕ್ರಾಸ್ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಅನೇಕ ಸ್ವಯಂಸೇವಕರು ಸ್ವಯಂಪ್ರೇರಣೆಯಿಂದ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಶ್ಲಾಘನೀಯ ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪತಹಸೀಲ್ದಾರ್ ತುಳಸಿ, ಶಿಕ್ಷಕ ಮಹಾಂತೇಶ್ ಕಾಟಪೂರಮಠ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts