More

    ಸೋಂಕು ನಿಯಂತ್ರಣಕ್ಕೆ ಲಸಿಕೆ ಪಡೆಯಿರಿ

    ಬೈಲಹೊಂಗಲ: ಪ್ರತಿಯೊಬ್ಬರೂ ಲಸಿಕೆ ಪಡೆದಾಗ ಮಾತ್ರ ಕರೊನಾ ಸೋಂಕು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

    ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ದೇಶಪಾಂಡೆ ೌಂಡೇಷನ್‌ನಿಂದ ತಾಲೂಕಾಡಳಿತ, ಸಾರ್ವಜನಿಕ ಆಸ್ಪತ್ರೆ, ಕರೊನಾ ಸೇನಾನಿಗಳಾದ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪತ್ರಕರ್ತರಿಗೆ ಆಕ್ಸಿಮೀಟರ್, ಮಾಸ್ಕ್, ಸ್ಯಾನಿಟೈಜರ್ ಸೇರಿ ಅಗತ್ಯ ವೈದ್ಯಕೀಯ ಕಿಟ್ ಅನ್ನು ಭಾನುವಾರ ವಿತರಿಸಿ ಮಾತನಾಡಿ, ಎಲ್ಲರೂ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಸೋಂಕಿನ ಲಕ್ಷಣ ಕಂಡುಬಂದರೆ ಸಕಾಲಕ್ಕೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.

    ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಕರೊನಾ ಸೇನಾನಿಗಳಿಗೆ ನೆರವಾಗುತ್ತಿರುವ ದೇಶಪಾಂಡೆ ಫೌಂಡೇಷನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಿರುವ ಗುಣಮಟ್ಟದ 100 ಆಕ್ಸಿಮೀಟರ್, 1,000 ಎನ್-95 ಮಾಸ್ಕ್, 500 ಮೆಡಿಸಿನ್ ಕಿಟ್, ಅಂಗನವಾಡಿ ಕಾರ್ಯಕರ್ತೆಯರಿಗೆ 294 ಕಿಟ್, ಆಶಾ ಕಾರ್ಯಕತೆಯರಿಗೆ 132 ಕಿಟ್, ನೇಸರಗಿ ಹೋಬಳಿಗೆ 98 ಕಿಟ್ ವಿತರಿಸಲಾಯಿತು. ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಸೀಲ್ದಾರ್ ಬಸವರಾಜ ನಾಗರಾಳ, ಪುರಸಭೆ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬಾಸಾಹೇಬ ಪಾಟೀಲ, ಕಾರ್ತಿಕ ಪಾಟೀಲ, ಡಾ.ಮಹಾಂತೇಶ ಕಳ್ಳಿಬಡ್ಡಿ, ಪಿಎಸ್‌ಐ ಈರಪ್ಪ ರಿತ್ತಿ, ನಿಂಗಪ್ಪ ಅರಕೇರಿ, ಮಹಾಂತೇಶ ಮತ್ತಿಕೊಪ್ಪ, ಶಂಕರಗೌಡ ಪಾಟೀಲ, ಶಿವರುದ್ರಪ್ಪ ಹಟ್ಟಿಹೊಳಿ, ಬಾಳಾಸಾಹೇಬ ದೇಸಾಯಿ, ವಿನಾಯಕ ಮರಡಿ, ಶಶಿಧರ ಚಿಕ್ಕೋಡಿ, ಶಂಕರ ಹೋಳಿ, ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಿದ್ದಣ್ಣವರ, ಮುಖ್ಯ ವೈದ್ಯೆ ಡಾ.ನಿರ್ಮಲಾ ಮಹಾಂತಶೆಟ್ಟಿ, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts