More

    ಸೋಂಕು ಹತೋಟಿಗೆ ಲಸಿಕೆ ಪರಿಣಾಮಕಾರಿ, ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ, ವಾಗಟ ಗ್ರಾಪಂ ವ್ಯಾಪ್ತಿಯಲ್ಲಿ ಉಚಿತ ಲಸಿಕಾ ಅಭಿಯಾನ

    ಬೆಂಗಳೂರು ಗ್ರಾಮಾಂತರ: ಕರೊನಾ ಮಾಹಾಮಾರಿ ನಿಯಂತ್ರಣ ಮಾಡಲು ಲಸಿಕೆ ಪರಿಣಾಮಕಾರಿಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟಿಬಿ ಚಾರಿಟಬಲ್ ಟ್ರಸ್ಟ್‌ನಿಂದ ಉಚಿತವಾಗಿ ಲಸಿಕೆ ನೀಡುವ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

    ಹೋಬಳಿಯ ವಾಗಟ ಗ್ರಾಪಂ ವ್ಯಾಪ್ತಿಯ ಮಾಕನಹಳ್ಳಿ, ಕಾಚಾರಕನಹಳ್ಳಿ, ಬಿಸನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಎಂಟಿಬಿ ಚಾರಿಟಬಲ್ ಟ್ರಸ್ಟ್‌ನಿಂದ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

    ಪ್ರತಿಯೊಬ್ಬರೂ ಲಸಿಕೆ ಪಡೆದು ಕರೊನಾ ಸೋಂಕಿನಿಂದ ರಕ್ಷಣೆ ಪಡೆಯಬೇಕು. ಲಸಿಕೆಯ ವದಂತಿಗಳಿಗೆ ಕಿವಿಗೊಡಬಾರದು. ಹಾಗೆಯೇ ಸಾರ್ಚಜನಿಕರು ಕರೊನಾ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸುವುದು ಪರಸ್ಪರ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು ಎಂದರು.

    ಕರೊನಾ ಮಹಾಮಾರಿ ಸಾಕಷ್ಟು ಜನರ ಬಲಿದಾನ ಪಡೆದಿದೆ. ವ್ಯಾಕ್ಸಿನ್ ಮೂಲಕ ಮಾರಿ ಹಿಮ್ಮೆಟ್ಟಿಸಲು ಪ್ರಯತ್ನಿಸಲಾಗುತ್ತಿದೆ. ಖಾಸಗಿಯಲ್ಲಿ ವ್ಯಾಕ್ಸಿನ್‌ಗೆ ಸಾವಿರಾರು ರೂಪಾಯಿ ತೆರಬೇಕಿದೆ. ಕರೊನಾ ಲಾಕ್‌ಡೌನ್ ತೆರವಾಗಿದ್ದರೂ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲು ಸಾಕಷ್ಟು ಸಮಯಾವಕಾಶ ಬೇಕಿದೆ. ಜೀವನ ನಡೆಸುವುದೇ ಕಷ್ಟ ವಾಗಿದೆ. ಈ ಹಿನ್ನೆಲೆಯಲ್ಲಿ ಹೊಸಕೋಟೆ ತಾಲೂಕಿನಲ್ಲಿ ಸ್ವಂತ ಖರ್ಚಿನಲ್ಲಿ ಉಚಿತವಾಗಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

    ಲಸಿಕಾ ಕೇಂದ್ರಗಳಲ್ಲೂ ಎಚ್ಚರ: ಸದ್ಯದ ಪರಿಸ್ಥಿತಿಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ರಮ ಚಾಲ್ತಿಯಲ್ಲಿಟ್ಟಿದೆ. ಯಾರೂ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಲಸಿಕಾ ಕೇಂದ್ರಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಕರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.
    ಹೊಸಕೋಟೆ ನನ್ನ ಕರ್ಮ ಭೂಮಿ. ಇಲ್ಲಿನ ಜನ ಮೂರು ಬಾರಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಚುನಾವಣೆ ವೇಳೆ ನೀಡಿದ್ದ ಎಲ್ಲ ಭರವಸೆ ಈಡೇರಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಜತೆಜತೆಗೆ ಜಿಲ್ಲೆಯ ಇನ್ನು ಮೂರು ತಾಲೂಕುಗಳಲ್ಲಿ ಅಮೂಲಾಗ್ರ ಅಭಿವೃದ್ಧಿಗೆ ಮುಂದಾಗಿದ್ದೇನೆ. ಇದಕ್ಕೆ ರಾಜ್ಯ ಸರ್ಕಾರ ಒತ್ತಾಸೆಯಾಗಿದ್ದು, ಅಗತ್ಯ ಅನುದಾನ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts