More

    ಸೋಂಕು ಹರಡದಂತೆ ನಿರಂತರ ಜಾಗೃತಿ ಮೂಡಿಸಿ – ಮಹಾಂತೇಶ ಕವಟಗಿಮಠ

    ಚಿಕ್ಕೋಡಿ: ಕರೊನಾ ಸೋಂಕಿತರಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು. ಈ ವಿಷಯದಲ್ಲಿ ಯಾರೂ ನಿರ್ಲಕ್ಷೃ ಮಾಡಬೇಡಿ ಎಂದು ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಎಚ್ಚರಿಸಿದರು.

    ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಗುರುವಾರ ಜರುಗಿದ ಕೋವಿಡ್-19 ಮುಂಜಾಗ್ರತಾ ಕ್ರಮಗಳು, ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ರೆಮ್‌ಡಿಸಿವಿರ್ ಲಭ್ಯತೆ ಕುರಿತ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಕೆಲವರು ಸೋಂಕಿನ ಭಯದಿಂದ ಆಸ್ಪತ್ರೆಗೆ ಬರುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಅಧಿಕಾರಿಗಳು ನಿರಂತರ ಜಾಗೃತಿ ಮೂಡಿಸಬೇಕು. ಅಲ್ಲದೆ, 18 ವರ್ಷ ಮೇಲ್ಪಟ್ಟ ಎಲ್ಲರೂ ಕರೊನಾ ಲಸಿಕೆ ಹಾಕಿಸಿಕೊಳ್ಳಲು ನೋಂದಣಿ ಮಾಡಿಸಿಕೊಳ್ಳುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಕರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು ಎಂದರು.

    ಉಪವಿಭಾಗಾಧಿಕಾರಿ ಯುಕೇಶಕುಮಾರ, ತಹಸೀಲ್ದಾರ್ ಪ್ರವೀಣ ಜೈನ್, ಪೊಲೀಸ್ ಉಪ ಅಧೀಕ್ಷಕ ಮನೋಜ ನಾಯಿಕ, ಆರ್.ಆರ್ ಪಾಟೀಲ, ಡಾ. ಎಸ್.ಎಸ್. ಗಡಾದ, ವಿ.ವಿ. ಶಿಂಧೆ, ಚಿಕ್ಕೋಡಿ ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜು ಕವಟಗಿಮಠ, ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts