More

    ಸೌಜನ್ಯ ಹತ್ಯೆ ಮರು ತನಿಖೆಗೆ ಆಗ್ರಹಿಸಿ ಕೆಆರ್‌ಎಸ್ ಪಾದಯಾತ್ರೆ 

    ದಾವಣಗೆರೆ: ಬೆಳ್ತಂಗಡಿಯ ಬಾಲಕಿ ಸೌಜನ್ಯ ಹತ್ಯೆ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ತಕ್ಷಣವೇ ಮರು ತನಿಖೆ ನಡೆಸಲು ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಆ.26ರಿಂದ ಸೆ.8ರ ವರೆಗೆ ಬೆಳ್ತಂಗಡಿಯಿಂದ ಬೆಂಗಳೂರುವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ.
    ದೌರ್ಜನ್ಯದ ವಿರುದ್ಧ ಸೌಜನ್ಯ ಹೆಸರಿನಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಮುಂದಿನ ದಿನದಲ್ಲಿ ಇಂತಹ ಘಟನೆಗಳು ಮರುಕಳಿಸದಿರಲು ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ದಾವಣಗೆರೆ ಜಿಲ್ಲೆಯ ಉಸ್ತುವಾರಿ ಮಲ್ಲಿಕಾರ್ಜುನಯ್ಯ ಭಟ್ರಳ್ಳಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
    ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ 330 ಕಿ.ಮೀ ವರೆಗೆ ಪಾದಯಾತ್ರೆ ನಡೆಯಲಿದೆ. ಬೆಳ್ತಂಗಡಿಯಿಂದ ಧರ್ಮಸ್ಥಳ ಮಾರ್ಗವಾಗಿ ಉಜಿರೆ, ಚಾರ್ಮಾಡಿಘಾಟ್, ಬಣಕಲ್, ಜನ್ನಾಪುರ, ಬೇಲೂರು, ಹೂವಿನಹಳ್ಳಿ ಕಾವಲ್, ಶಾಂತಿಗ್ರಾಮ, ಚನ್ನರಾಯಪಟ್ಟಣ, ಕದಬಳ್ಳಿ, ಯಡಿಯೂರು, ಕುಣಿಗಲ್, ಸೋಲೂರು, ಮಾಕಳಿ ಮೂಲಕ ಸೆ. 8ರಂದು ಬೆಂಗಳೂರು ವಿಧಾನಸೌಧ ತಲುಪಲಿದೆ.
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ಷಹನವಾಜ್ ಖಾನಂ, ಎಂ.ಬಿ. ತಿಪ್ಪೇಸ್ವಾಮಿ, ಎನ್‌ಎಸ್.ಅಭಿಷೇಕ್, ರಹಮತ್ ಉಲ್ಲಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts