More

    ಸೌಲಭ್ಯ ಪಡೆದು ಆರ್ಥಿಕವಾಗಿ ಸದೃಢರಾಗಿ

    ಯಾದಗಿರಿ: ಗ್ರಾಮೀಣ ಭಾಗದಲ್ಲಿನ ರೈತಾಪಿ ವರ್ಗ ಸಕರ್ಾರಿ ಸೌಲಭ್ಯ ಪಡೆದು ಸ್ವಾಭಿಮಾನದ ಜೀವನ ಸಾಗಿಸುವಂತೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸಲಹೆ ನೀಡಿದರು.

    ಶನಿವಾರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಡಬ್ಲೂಡಿಸಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಹನಿ ನೀರಾವರಿಯ ಪರಿಕರಗಳನ್ನು ವಿತರಿಸಿ ಮಾತನಾಡಿ, ಕ್ಷೇತ್ರದ ಜನತೆ ಉದ್ಯೋಗ ಅರಸಿ ಪ್ರತಿವರ್ಷ ಹೆಚ್ಚಿನ ಪ್ರಮಾಣದಲ್ಲಿ ಗುಳೆ ಹೋಗುತ್ತಾರೆ. ಇದನ್ನು ತಪ್ಪಿಸಿ, ಸ್ಥಳೀಯವಾಗಿ ಅವರು ನೆಮ್ಮದಿ ಜೀವನ ಸಾಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಅನ್ನದಾತ ಸಂಕಷ್ಟದಲ್ಲಿದ್ದಾನೆ. ಪ್ರಧಾನಮಂತ್ರ ಕೃಷಿ ಸಿಂಚಾಯಿ ಯೋಜನೆಯಡಿ ಈ ವರ್ಷ 6 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ಮೂರು ಸಾವಿರ ರೈತರಿಂದ ಸ್ಪಿಂಕಲರ್ಗಳಿಗಾಗಿ ಅಜರ್ಿ ಬಂದಿವೆ. ಹೀಗಾಗಿ ಹೆಚ್ಚುವಬರಿ 5 ಕೋಟಿ ರೂ.ಅನುದಾನ ಬಿಡುಗಡೆಗೊಳಿಸಲು ರಾಜ್ಯ ಕೃಷಿ ಸಚಿವರಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

    ವಾಗಿ ಸಬಲರಾಗಬೇಕು. ಎಷ್ಟೇ ಸಮಸ್ಯೆ ಇದ್ದರೂ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಕ್ಷೇತ್ರದಲ್ಲಿನ ಸರಕಾರಿ ಶಾಲೆ ಮತ್ತು ಆಸ್ಪತ್ರೆಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಜನತೆ ನೆಮ್ಮದಿಯಿಂದ ಜೀವನ ಸಾಗಿಸಬೇಕು ಎಂಬುದು ನನ್ನ ಉದ್ದೇಶ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts