More

    ಸೌಹಾರ್ದತೆ ಉತ್ತೇಜಿಸಲು ಸದ್ಭಾವನಾ ದಿನ ಆಚರಣೆ

    ಸೊರಬ: ಎಲ್ಲ ಜಾತಿ, ಧರ್ಮ, ಭಾಷೆ ಹಾಗೂ ಜನರಲ್ಲಿ ಸೌಹಾರ್ದತೆ ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆ ಮೂಡಿಸಿ, ಹಿಂಸಾಚಾರ ತ್ಯಜಿಸುವಂತೆ ಮಾಡುವುದು ಸದ್ಭಾವನಾ ದಿನದ ಉದ್ದೇಶವಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿವರ್ಷ ಸದ್ಭಾವನಾ ದಿನ ಆಚರಿಸಲಾಗುತ್ತಿದೆ ಎಂದು ಪ್ರಾಚಾರ್ಯ ಎಚ್.ಸುರೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧ-ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯತೆ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆ. ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts