More

    ಸ್ಕಿಜೋಫ್ರೇನಿಯಾ ಖಾಯಿಲೆಯ ಬಗ್ಗೆ ಅರಿವನ್ನು ಹೊಂದಬೇಕು: ಡಾ.ಬಿ.ಎನ್.ಶಿವಸ್ವಾಮಿ

    ಹಾಸನ: ಸ್ಕಿಜೋಫ್ರೇನಿಯಾ ಖಾಯಿಲೆಯ ಬಗ್ಗೆ ಎಲ್ಲರೂ ಅರಿವನ್ನು ಹೊಂದಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಶಿವಸ್ವಾಮಿ ಕರೆ ನೀಡಿದರು.
    ನಗರದ ಎಂ.ಜಿ.ರಸ್ತೆಯಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಹಿಮ್ಸ್ ನ ಮನೋವೈದ್ಯಕೀಯ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಸ್ಕಿಜೋಫ್ರೇನಿಯಾ ಖಾಯಿಲೆಯು ಒಂದು ಮಾನಸಿಕ ಅಸ್ವಸ್ಥೆಯಾಗಿದ್ದು, ಅಸಹಜವಾದ ಆಲೋಚನೆ ಮತ್ತು ನಡವಳಿಕೆಯ ತೊಂದರೆಯನ್ನು ಉಂಟುಮಾಡುತ್ತದೆ. ಸ್ಕಿಜೋಫ್ರೇನಿಯಾ ಸಮಸ್ಯೆ ಹೊಂದಿದ ವ್ಯಕ್ತಿ ಶ್ರವಣೇಂದ್ರಿಯ ಅಥವಾ ದೃಶ್ಯ ಭ್ರಮೆಗಳು ಭ್ರಮೆಯ ಆಲೋಚನೆಗಳು ಹಾಗೂ ನಕಾರಾತ್ಮಕ ಲಕ್ಷಣಗಳನ್ನು ತೋರಿಸುತ್ತಾರೆ ಎಂದರು.
    ವಿಶೇಷ ಉಪನ್ಯಾಸ ನೀಡಿದ ಹಿಮ್ಸ್ ನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಜಿ.ಭಾರತಿ, ಇತ್ತೀಚೆಗೆ ಕೆಲಸದ ಒತ್ತಡದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ, ಹೀಗಾಗಿ ಸಮಯ ಪರಿಪಾಲನೆ ಮತ್ತು ಮಾನಸಿಕ ಒತ್ತಡವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆಯನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
    ಜಿಲ್ಲಾ ಆರೋಗ್ಯ ನಿಯಂತ್ರಣಾಧಿಕಾರಿ ಡಾ.ಜಿ.ಎಸ್.ನಾಗಪ್ಪ ಮಾತನಾಡಿ, ಡೆಂಗಿ ಮತ್ತು ಮಲೇರಿಯಾ ಬಗ್ಗೆ ಎಚ್ಚೇತ್ತುಕೊಳ್ಳಬೇಕು ಎಂದು ಮಾಹಿತಿಯನ್ನು ನೀಡಿದ ಅವರು, ಪ್ಲಾಸ್ಟಿಕ್ ವಸ್ತುಗಳನ್ನು ಬಿಟ್ಟು ಮರು ಬಳಕೆಯ ವಸ್ತುಗಳನ್ನು ಹೆಚ್ಚಾಗಿ ಬಳಕೆಮಾಡಬೇಕು ಎಂದು ಹೇಳಿದರು.
    ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಜಿ.ಕವಿತಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ನಾಗೇಶ್ ಪಿ.ಆರಾಧ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಕಾರ್ಯಕ್ರಮದಲ್ಲಿ ಆಪ್ತ ಸಮಾಲೋಚನಾ ಘಟಕದ ಸಂಚಾಲಕಿ ಡಾ.ಟಿ.ಜಿ.ಮೀನಾಕ್ಷಿ, ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಎ.ಎಂ.ಲೀಲಾವತಿ, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಗೊರೂರು, ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಇದ್ದರು.
    ಈ ಸಂದರ್ಭದಲ್ಲಿ ರಾಷ್ಟ್ರೀಯ ಡೆಂಗಿ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಡೆಂಗಿ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts