More

    ಸ್ತ್ರೀ ದೌರ್ಜನ್ಯ ಎಸಗಿದ ವ್ಯಕ್ತಿಪರ ಮೋದಿ ಮತಯಾಚನೆ

    ಸೇಡಂ (ಕಲಬುರಗಿ): ಬಿಜೆಪಿಗೆ 400 ಸೀಟ್​ ಈ ಸಲ ಸಿಕ್ಕರೆ ಸಂವಿಧಾನವನ್ನು ಬದಲಾಯಿಸುತ್ತಾರೆ. ಅವರ ಸಂವಿಧಾನದಿಂದ ಸಮಾಜದ ಎಲ್ಲ ವರ್ಗದವರಿಗೆ ಸಮಾನ ಅವಕಾಶ ಹಾಗೂ ಹಕ್ಕು ಸಿಗುತ್ತದೆ. ಆದರೆ ಸಂವಿಧಾನ ಬದಲಾದರೆ ಎಲ್ಲ ಅವಕಾಶಗಳು ಕಳೆದು ಹೋಗಲಿವೆ. ಕೋಲಿ ಸಮಾಜವನ್ನು ಎಸ್​ಟಿ ಸೇರಿಸಲು ರಾಜ್ಯ ಸರ್ಕಾರ ಕಳಿಸಿದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ತಿರಸ್ಕಾರ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹೇಳಿದರು.

    ಸೇಡಂನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್​ ಪ್ರಚಾರ ಸಭೆಯಲ್ಲಿ ಮಾತನಾಡಿ, ಒಲಿಂಪಿಕ್ಸ್​ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಮೋದಿ ಸುಮ್ಮನೆ ಇದ್ದರು. ಮೋದಿ ಜತೆ ಇರುವ ವ್ಯಕ್ತಿ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅದೆ ವ್ಯಕ್ತಿಯ ಪರ ಮತಯಾಚಿಸಿದ್ದಾರೆ. ಮೋದಿ ಹಾಗೂ ಅಮಿತ್​ ಶಾ ಉತ್ತರಿಸಲಿ. ಅದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ ಪರಾರಿಯಾದ. ಮಂಗಲ ಸೂತ್ರದ ಬಗ್ಗೆ ಮಾತನಾಡುವ ಮೋದಿ ಈಗ ಏನು ಹೇಳುತ್ತಾರೆ? ಈ ದೇಶದಲ್ಲಿ ಬಹಳಷ್ಟು ಪ್ರದಾನಿಗಳು ಆಗಿ ಹೋಗಿದ್ದಾರೆ. ಅವರೆಲ್ಲ ಸತ್ಯದ ಹಾದಿಯಲ್ಲಿ ನಡೆದಿದ್ದಾರೆ. ಆದರೆ ಮೋದಿ ಅವರು ಮಹಿಳೆಯರ ರಕ್ಷಣೆ ಏನು ಮಾಡಿದ್ದಾರೆ ಹೇಳಲಿ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts