More

    ಸ್ಥಳೀಯರೇ ಉಸ್ತುವಾರಿ ಸಚಿವರಾಗಲಿ

    ಬೆಳಗಾವಿ: ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ಸ್ಥಳೀಯರೇ ಜಿಲ್ಲಾ ಉಸ್ತುವಾರಿ ಸಚಿವರಾಗಿರಬೇಕು. ಸ್ಥಳೀಯರಿಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ಹೀಗಾಗಿ ಜಿಲ್ಲೆಯಲ್ಲಿರುವ ನಾಲ್ವರು ಸಚಿವರ ಪೈಕಿ ಒಬ್ಬರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುತ್ತೇನೆ ಎಂದಿದ್ದಾರೆ. ಮುಖ್ಯಮಂತ್ರಿಗಳೇ ಎಲ್ಲವನ್ನೂ ಮಾಡುವುದಾದರೆ ನಮ್ಮ ಜಿಲ್ಲೆಗೆ ನಾಲ್ವರು ಸಚಿವರು ಏಕೆ ಬೇಕು ಎಂದು ಪ್ರಶ್ನಿಸಿದರು.

    ಕೋವಿಡ್ ಸಹಾಯವಾಣಿ ಕೇಂದ್ರ ಉದ್ಘಾಟನೆ: ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಅನುಕೂಲ ಕಲ್ಪಿಸಲು ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಸದುಪಯೋಗ ಮಾಡಿಕೊಳ್ಳಬೇಕು ಎಂದು ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪಕ್ಷದ ಗ್ರಾಮೀಣ ಜಿಲ್ಲಾ ಘಟಕ ಭಾನುವಾರ ತೆರೆದ ಕೋವಿಡ್-19 ಸಹಾಯವಾಣಿ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿ, ಕರೊನಾ ಸಂಬಂಧಿಸಿದ ಸೇವೆ ಪಡೆಯಲಿಚ್ಛಿಸುವವರು ಮೊ.ಸಂ.7204001577 ಸಂಪರ್ಕಿಸಬಹುದು ಎಂದರು. ಶಾಸಕ ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿ.ಬಿ.ರಂಗನಗೌಡರ ಇದ್ದರು.

    ‘ಸಿಡಿ’ ಅಂತಿಮ ವರದಿ ಬರಲಿ

    ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ತನಿಖಾ ತಂಡ, ನ್ಯಾಯಾಲಯದಿಂದ ಸತ್ಯಾಸತ್ಯತೆ ಹೊರಬರಲಿ. ಅಂತಿಮ ವರದಿ ಬರಲಿ. ಅಲ್ಲಿಯವರೆಗೆ ಕ್ಲೀನ್ ಚಿಟ್ ಹಾಗೂ ಮುಂದಿನ ಹೋರಾಟದ ಬಗ್ಗೆ ಮಾತನಾಡುವುದಿಲ್ಲ ಎಂದು ಸತೀಶ ಜಾರಕಿಹೊಳಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2023ರ ಮೇ ತಿಂಗಳಲ್ಲಿ ಅದಕ್ಕೆ ಉತ್ತರ ಸಿಗಲಿದೆ ಎಂದರು.

    ನಾಯಕತ್ವ ಬದಲಾವಣೆ ಗೊಂದಲದಲ್ಲಿ ಮುಳುಗಿರುವ ಬಿಜೆಪಿ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಲವಾಗಿದೆ. ತನ್ನ ವೈಲ್ಯ ಮರೆಮಾಚಿ ಕಾಂಗ್ರೆಸ್ ವಿರುದ್ಧ ಆರೋಪಿಸುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ್ದರಿಂದ ಜನರು ಖಾಸಗಿ ಆಸ್ಪತ್ರೆಗಳತ್ತ ಹೊರಟಿದ್ದಾರೆ.
    | ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts