More

    ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ, ಕೆಪಿಸಿಸಿ ವಕ್ತಾರ ಮಹಾಂತೇಶ ಹಟ್ಟಿ ಹೇಳಿಕೆ, ಸುನೀಲಗೌಡ ಪಾಟೀಲ ಗೆಲುವು ಶತಃ ಸಿದ್ದ

    ವಿಜಯಪುರ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ವಿಜಯಪುರ-ಬಾಗಲಕೋಟೆ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲರ ಗೆಲುವು ಶತಸಿದ್ದ ಎಂದು ಕೆಪಿಸಿಸಿ ವಕ್ತಾರ ಮಹಾಂತೇಶ ಹಟ್ಟಿ ಹೇಳಿದರು‌.
    ಸುನೀಲಗೌಡ ಪಾಟೀಲರು ಸ್ಥಳೀಯ ಸಂಸ್ಥೆಗಳ ಪ್ರಗತಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಹೀಗಾಗಿ ಸದಸ್ಯರು ಅಪಾರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
    ಕರೊನಾ ಸಂದರ್ಭದಲ್ಲಿ ಪ್ರತಿ ಪಂಚಾಯಿತಿಗೆ ಸ್ಯಾನಿಟೈಸರ್ ಯಂತ್ರ ಒದಗಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರ ಮಾಸಾಶನ ಹೆಚ್ಚಿಸಲು ಶ್ರಮಿಸುತ್ತಿದ್ದಾರೆ. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಸದನದಲ್ಲಿ ಹಲವಾರು ಬಾರಿ ಪ್ರಬಲವಾದ ಧ್ವನಿ ಮೊಳಗಿಸಿದ್ದಾರೆ. ಸರಳ ಹಾಗೂ ಸಜ್ಜನಿಕೆಯ ನೇತಾರವಾಗಿರುವ ಸುನೀಲಗೌಡ ಪಾಟೀಲರಿಗೆ ಬಾಗಲಕೋಟೆ ಭಾಗದಿಂದಲೂ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಪ್ರಥಮ ಪ್ರಾಶಸ್ತ್ಯ ಮತಗಳು ದೊರಕಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಸ್ಥಳೀಯ ಸಂಸ್ಥೆಗಳ ಸದಸ್ಯರ ಧ್ವನಿಯಾಗಿರುವ‌ ಸುನೀಲಗೌಡ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts