More

    ಸ್ಥಳ ಪರಿಶೀಲಿಸಿದ ಅಧಿಕಾರಿಗಳು

    ಸುಂಟಿಕೊಪ್ಪ: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡೆಂೆ ಜ್ವರ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಕಾಶ್ ಹಾಗೂ ಡಿಎಚ್‌ಒ ಡಾ.ಸತೀಶ್‌ಕುಮಾರ್ ಅವರು ವಿವಿಧ ವಾರ್ಡ್‌ಗಳಿಗೆ ತೆರಳಿ ಸ್ವಚ್ಛತೆ ಬಗ್ಗೆ ಸ್ಥಳ ಪರಿಶೀಲಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

    ಸುಂಟಿಕೊಪ್ಪ ಪಟ್ಟಣದಲ್ಲಿ ಕಳೆದ 1 ತಿಂಗಳಿನಲ್ಲಿ ಡೆಂಘೆ ಜ್ವರದಿಂದ ಬಳಲುತ್ತಿರುವ ನೂರಾರು ಮಂದಿ ಮಡಿಕೇರಿ ಜಿಲ್ಲಾಸ್ಪತ್ರೆ, ಕುಶಾಲನಗರ ಆರೋಗ್ಯ ಸಮುದಾಯ ಭವನ ಹಾಗೂ ಕುಶಾಲನಗರ ಕೆಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಜ್ವರದಿಂದ ಬಳಲುತ್ತಿರುವವರು ಪ್ರತಿನಿತ್ಯ ನೂರಾರು ಮಂದಿ ಹೊರ ರೋಗಿಗಳಾಗಿ ಬಂದು ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದಾರೆ. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದರು. ಜತೆಗೆ ಕೆಲವು ವಾರ್ಡ್‌ಗಳಿಗೆ ತೆರಳಿ ಪರಿಶೀಲಿಸಿದರು.

    ಸುಂಟಿಕೊಪ್ಪ ಗ್ರಾಮ ಪಂಚಾಯಿತಿಗೆ ಜಿಪಂ ಸಿಇಒ ಡಾ.ಆಕಾಶ್ ಭೇಟಿ ನೀಡಿದರು. ಗ್ರಾಮ ಪಂಚಾಯಿತಿಯಿಂದ ಶುಚಿತ್ವ ಕಾಪಾಡಲು ಆದ್ಯತೆ ನೀಡಬೇಕು. ಚರಂಡಿಯಲ್ಲಿ ನಿಂತ ಕೊಳಚೆ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಡೆಂೆಗೆ ಕಾರಣವಾಗಬಹುದು. ಹೀಗಾಗಿ ಚರಂಡಿಯನ್ನು ಸ್ವಚ್ಛಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

    ಡಿಎಚ್‌ಒ ಡಾ.ಸತೀಶ್‌ಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರಗತಿ, ಹೆಲ್ತ್ ಇನ್ಸ್‌ಪೆಕ್ಟರ್‌ಗಳಾದ ಶೀನಿವಾಸ್, ಮುತ್ತುರಾಜ್, ಜನಾರ್ದನ, ವಿಶ್ವಜ್ಞ ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts