More

    ಸ್ಥಾಯಿ ಸಮಿತಿಗೆ ಅವಿರೋಧ ಆಯ್ಕೆ

    ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆಯಿತು.

    ಪಾಲಿಕೆ ಸಭಾಭವನದಲ್ಲಿ ಮಂಗಳವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿಗೆ ಶಿವು ಮೆಣಸಿನಕಾಯಿ, ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿಗೆ ವಿಜಯಾನಂದ ಶೆಟ್ಟಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಸುರೇಶ ಬೆದರೆ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗೆ ರಾಧಾಬಾಯಿ ಸಪಾರೆ ಅಯ್ಕೆಯಾದರು.

    ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಎಲ್ಲ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಸಹಜವಾಗಿಯೇ ಬಿಜೆಪಿಯ ಪಾಲಾಗಿದೆ. ಮೇಯರ್ ಈರೇಶ ಅಂಚಟಗೇರಿ ಚುನಾವಣೆಯ ಅಧ್ಯಕ್ಷಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಉಪಮೇಯರ್ ಉಮಾ ಮುಕುಂದ, ಸ್ಥಾಯಿ ಸಮಿತಿಗಳ ಸದಸ್ಯರು, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ., ಇತರರು ಇದ್ದರು.

    ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಜುಲೈ 11ರಂದು ಚುನಾವಣೆ ನಡೆದಿತ್ತು. ಆಗಲೂ ಎಲ್ಲ ನಾಲ್ಕು ಸಮಿತಿಗಳಿಗೆ 28 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು. ಮಂಗಳವಾರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಅಧ್ಯಕ್ಷರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಪಾಲಿಕೆ ಕಚೇರಿ ಆವರಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts