More

    ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಿ

    ಅರಸೀಕೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾಲ ಕಾಲಕ್ಕೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಜ್ಯ ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.

    ನಗರದ ಶ್ರೀಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೊಳಂಬ ಲಿಂಗಾಯತ ಕೇಂದ್ರ ಕಚೇರಿ ಮತ್ತು ಅರಸೀಕೆರೆ ಉಪಸಮಿತಿ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ಸತತ ಪರಿಶ್ರಮದಿಂದ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳನ್ನು ಪುರಸ್ಕರಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ನಡೆಸುವ ಕೇಂದ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆದು ಬದುಕು ಹಸನುಗೊಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    ಬೇಲೂರು ಕ್ಷೇತ್ರದ ಶಾಸಕ ಕೆ.ಎಂ.ಲಿಂಗೇಶ್ ಮಾತನಾಡಿ, ಶೇ.75ರಷ್ಟು ಸಮುದಾಯ ಕೃಷಿಕ ವೃತ್ತಿಯನ್ನೇ ಅವಲಂಬಿಸಿದೆ. ರಾಜಕೀಯ, ಸಾಂಸ್ಕೃತಿಕ, ಶಿಕ್ಷಣ ಕ್ಷೇತ್ರ ಸೇರಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ಮೀಸಲಾತಿ ಅನಿವಾರ್ಯವಾಗಿದೆ. ನಮ್ಮ ಬೇಡಿಕೆ ಈಡೇರಿಸುವಂತೆ ಸದನದಲ್ಲಿ ಒಂಟಿಯಾಗಿ ಧ್ವನಿ ಎತ್ತಿ ಮಾತನಾಡಿದ್ದೇನೆ. ವೀರಶೈವ ಲಿಂಗಾಯತ ಸಮಾಜದ ಎಲ್ಲ ಶಾಸಕರು ಪಕ್ಷಾತೀತವಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದರು.

    ನಿಕಟಪೂರ್ವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಜಿಲ್ಲೆಯ ಪ್ರತಿಭಾನ್ವಿತರು ಹೆಚ್ಚು ಸರ್ಕಾರಿ ಹುದ್ದೆ ಗಿಟ್ಟಿಸುವ ಮೂಲಕ ಶಿಕ್ಷಣ ಕಲಿಸಿದ ಗುರು ಹಾಗೂ ಪಾಲಕರಿಗೆ ಗೌರವ ತರಬೇಕು ಎಂದು ಕರೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts