More

    ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ -ಎಡಿಸಿ ಪಿ.ಎನ್. ಲೋಕೇಶ್ ಸೂಚನೆ 

    ದಾವಣಗೆರೆ: ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನ. 18, 19 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ನಗರದ 18 ಪರೀಕ್ಷಾ ಕೇಂದ್ರಗಳಲ್ಲಿ ಕೆ.ಇ.ಎ ಮಾರ್ಗಸೂಚಿ ಅನುಸರಿಸುವಂತೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಸೂಚಿಸಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ನ.18ಕ್ಕೆ ನಗರದ 3 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗಿನ ಮೊದಲ ಅಧಿವೇಶನದಲ್ಲಿ 458 ಅಭ್ಯರ್ಥಿಗಳು, ಮಧ್ಯಾಹ್ನ 2.30ರಿಂದ 4.30ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ 1329 ಮಂದಿ ಪರೀಕ್ಷೆ ಬರೆಯಲಿದ್ದಾರೆ. ನ.19 ರಂದು 18 ಪರೀಕ್ಷಾ ಕೇಂದ್ರಗಳಿವೆ. ಬೆಳಗಿನ ಅಧಿವೇಶನದಲ್ಲಿ 8000, ಮಧ್ಯಾಹ್ನದ ಅಧಿವೇಶನದಲ್ಲಿ 6867 ಅಭ್ಯರ್ಥಿಗಳು ಪರೀಕ್ಷೆ ಎದುರಿಸುವರು.
    ಪರೀಕ್ಷಾರ್ಥಿಗಳು ಆಯಾ ಕೇಂದ್ರದೊಳಗೆ ಸ್ಮಾರ್ಟ್‌ವಾಚ್, ಮೊಬೈಲ್, ಕ್ಯಾಲ್ಕು ್ಯಲೇಟರ್ ಸೇರಿ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ದಿನದಂದು ಆಯಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದರು.
    ನಿಯೋಜಿತ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಒಎಂಆರ್ ಶೀಟ್‌ಗಳನ್ನು ಸಕಾಲಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಪರೀಕ್ಷಾ ವೇಳೆ ಮೊಬೈಲ್ ಬಳಸಬಾರದು ಎಂದು ತಿಳಿಸಿದರು. ಡಿಡಿಪಿಯು ಎಸ್.ಜಿ.ಕರಿಸಿದ್ದಪ್ಪ ಹಾಗೂ ವಿವಿಧ ಪ.ಪೂ. ಕಾಲೇಜುಗಳ ಪ್ರಾಚಾರ್ಯರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts