More

    ಸ್ಮಶಾನ ಭೂಮಿ ಮಂಜೂರಿಗೆ ಕ್ರಮ

    ಬೆಳಗಾವಿ: ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮಗಳಿಗೆ ಕೂಡಲೇ ಭೂಮಿ ಮಂಜೂರು ಮಾಡಲು ಕ್ರಮ ವಹಿಸಲಾಗಿದ್ದು, ಸ್ಮಶಾನ ಭೂಮಿ ಅಭಿವೃದ್ಧಿಗೆ ಬಾಕಿಯಿರುವ ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಎಸ್‌ಸಿಪಿ, ಟಿಎಸ್‌ಪಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

    ಬೆಳವಡಿ ಗ್ರಾಮದ ಸ್ಮಶಾನ ಭೂಮಿ ಅಭಿವೃದ್ಧಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ನರೇಗಾ ಯೋಜನೆ ಹಾಗೂ ಇಲಾಖೆಗಳ ಅನುದಾನ ಬಳಕೆ ಮೂಲಕ ಅಭಿವೃದ್ಧಿ ಪಡಿಸಲಾಗುವುದು. ನಿಪ್ಪಾಣಿ ತಾಲೂಕಿನ ಯರನಾಳ ಗ್ರಾಮದಲ್ಲಿ ಈಗಾಗಲೇ ಸ್ಮಶಾನ ಭೂಮಿ ಮಂಜೂರು ಮಾಡಲಾಗಿದೆ. ಹೆಚ್ಚುವರಿ ಬೇಡಿಕೆಯ ಮೇರೆಗೆ ಇನ್ನೊಂದು ಸ್ಮಶಾನ ಭೂಮಿ ಮಂಜೂರು ಮಾಡಲಾಗಿದೆ. ಸರ್ಕಾರದ ವತಿಯಿಂದ ಒದಗಿಸಿರುವ ಸ್ಮಶಾನ ಭೂಮಿ ಎಲ್ಲರಿಗೂ ಬಳಕೆ ಮಾಡಲು ಅವಕಾಶವಿರುತ್ತದೆ. ಒಂದು ವೇಳೆ ಯಾರಾದರೂ ಅಡ್ಡಿಪಡಿಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ನಾಮ ನಿರ್ದೇಶಕ ಸದಸ್ಯ ವಿಜಯ ತಳವಾರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಯೋಜನೆಯಡಿ ಫಲಾನುಭವಿಗಳಿಗೆ ಬಿಡುಗಡೆಯಾದ ಸಬ್ಸಿಡಿ ಹಣ ಬ್ಯಾಂಕ್‌ನಲ್ಲಿ ಎಫ್.ಡಿ ಇಡುವ ಮೂಲಕ ಸಾಲ ಒದಗಿಸಲಾಗಿದೆ. ಕೂಡಲೇ ಎಫ್.ಡಿ. ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

    ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಬ್ಯಾಂಕ್ ಅಧಿಕಾರಿಗಳು ಸಾಲ ಸೌಲಭ್ಯಗಳ ಸಬ್ಸಿಡಿ ಹಣ ಎ್.ಡಿ. ರೂಪದಲ್ಲಿ ಇರಿಸದೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು. ಸದ್ಯ ಈ ಪ್ರಕರಣ ನ್ಯಾಯಾಲಯದಲ್ಲಿದ್ದು, ಇತ್ಯರ್ಥವಾಗಲಿದೆ ಎಂದು ತಿಳಿಸಿದರು.

    ನಿಪ್ಪಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ ಭೇಟಿ ನೀಡಿದ ಜಾಗದಲ್ಲಿ ಭವನ ನಿರ್ಮಾಣಕ್ಕೆ 1.37 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, 10 ಎಕರೆ ಜಾಗ ಮಂಜೂರು ಮಾಡಲಾಗಿದೆ. ಕೂಡಲೇ ಭವನ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮಾತನಾಡಿ, ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ನಗರದಲ್ಲಿ ಒಟ್ಟು 7 ಪ್ರಕರಣ ದಾಖಲಾಗಿದ್ದು, ತನಿಖೆ ಹಂತದಲ್ಲಿವೆ. ಅದೇ ರೀತಿ ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಳೆದ 3 ತಿಂಗಳಿಂದ 21 ಪ್ರಕರಣ ದಾಖಲಾಗಿದ್ದು, 1 ಪ್ರಕರಣ ಆರೋಪ ಪಟ್ಟಿ ಮಾಡಲಾಗಿದೆ ಹಾಗೂ 19 ಪ್ರಕರಣಗಳು ತನಿಖೆ ಹಂತದಲಿದ್ದು, 1 ಪ್ರಕರಣ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರ 26 ಪ್ರಕರಣಗಳಲ್ಲಿ 26.25 ಲಕ್ಷ ರೂ.ಪರಿಹಾರ ಧನ ವಿತರಿಸಲಾಗಿದೆ ಎಂದು ತಿಳಿಸಿದರು.ಜಿಪಂ ಸಿಇಒ ಹರ್ಷಲ್ ಭೋಯರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ. ಕಲ್ಲೇಶ, ಪರಿಶಿಷ್ಟ ವರ್ಗಗಳ
    ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಕುರಿಹುಲಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts