More

    ಸ್ಮಾರ್ಟ್‌ಸಿಟಿಯಲ್ಲಿ ಸೌಲಭ್ಯಕ್ಕಿಂತ ಸಮಸ್ಯೆಗಳೇ ಹೆಚ್ಚು

    ಬೆಳಗಾವಿ: ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಖಾಸಗೀಕರಣ ಮಾಡುವುದನ್ನು ಹೊರತುಪಡಿಸಿ, ಜನತೆಗೆ ಯಾವುದೇ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಸ್ಮಾರ್ಟ್‌ಸಿಟಿ ಯೋಜನೆ ಹೆಸರಲ್ಲಿ ವೈಜ್ಞಾನಿಕವಾಗಿ ನಡೆಯಬೇಕಿದ್ದ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದ ಪರಿಣಾಮ ಸಮಸ್ಯೆಗಳೇ ಹೆಚ್ಚಾಗಿವೆ ಎಂದು ಮಾಜಿ ಶಾಸಕ ರಮೇಶ ಕುಡಚಿ ಆರೋಪಿಸಿದರು.

    ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಸಾವಿರ ಕೋಟಿ ರೂ.ಅನುದಾನದಡಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಾಲ್ಕೈದು ವರ್ಷದಿಂದ ಕಾಮಗಾರಿ ನಡೆಸಿದರೂ ಬೆಳಗಾವಿ ನಾಗರಿಕರಿಗೆ ಯಾವುದೇ ಸೌಲಭ್ಯಗಳು ಲಭಿಸುತ್ತಿಲ್ಲ. ಬದಲಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 2015 ರಿಂದ 2024ರ ವರೆಗೆ ನಡೆಯಬೇಕಿದ್ದ ಯೋಜನೆಗಳ ಅನುಷ್ಠಾನ ಸಮರ್ಪಕವಾಗಿಲ್ಲ. ಅನಗತ್ಯವಾಗಿ ತಮ್ಮ ಅನುಕೂಲಕ್ಕಾಗಿ ಯೋಜನೆಗಳ ವಿನ್ಯಾಸ ಹಾಗೂ ಕಾರ್ಯರೂಪದಲ್ಲಿ ನಿಯಮ ಉಲ್ಲಂಘಿಸಿ, ಪದೇ ಪದೆ ಬದಲಾವಣೆ ತರುವುದರಿಂದಲೇ ಸ್ಮಾರ್ಟ್‌ಸಿಟಿ ಯೋಜನೆ ಹಳ್ಳ ಹಿಡಿದಿದೆ ಎಂದು ದೂರಿದರು.

    ವಿಧಾನಸಭೆ ಚುನಾವಣೆಗೆ ಮತ್ತೆ ಸ್ಪರ್ಧೆಗೆ ತಯಾರಿ ನಡೆಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಹೌದು, ಇಲ್ಲ ಎಂದು ಯಾವುದನ್ನೂ ಹೇಳಲ್ಲ, ಒಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ’ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸರಳಾ ಸಾತ್ಪುತೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts