More

    ಸ್ಮಾರ್ಟ್‌ಸಿಟಿ ಕಾಮಗಾರಿ ನಿಲ್ಲಿಸಲು ಒತ್ತಾಯ

    ಬೆಳಗಾವಿ: ನಗರದ ವ್ಯಾಕ್ಸಿನ್ ಡಿಪೋ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಕೈಗೊಂಡಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ತಡೆಹಿಡಿಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ‘ಸೇವ್ ವ್ಯಾಕ್ಸಿನ್ ಡಿಪೋ’ ಸಂಘಟನೆ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    ನಗರದ ಹೃದಯ ಭಾಗದಲ್ಲಿರುವ ವ್ಯಾಕ್ಸಿನ್ ಡಿಪೋದಲ್ಲಿ ಸಾವಿರಾರು ಜಾತಿಯ ಮರಳಿವೆ. ಅಲ್ಲದೆ, ಐತಿಹಾಸಿಕ ಹಾಗೂ ಶತಮಾನದ ಹಿಂದಿನ ಕಟ್ಟಡಗಳಿವೆ. ಆದರೆ, ನಾಲ್ಕೈದು ವರ್ಷದ ಅವಧಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸಾವಿರಾರು ಮರ ಕಡಿದು ಗಾಜಿನ ಮನೆ ಸೇರಿ ಇನ್ನಿತರ ಕಟ್ಟಡ ನಿರ್ಮಿಸಲಾಗಿದೆ. ಆ ಕಟ್ಟಡಗಳು ಕೂಡ ನಿರ್ವಹಣೆ ಇಲ್ಲದೆ ಸಂಪೂರ್ಣ ಹಾಳಾಗಿವೆ ಎಂದು ದೂರಿದರು.

    ಸ್ಮಾರ್ಟ್ ಸಿಟಿ ಯೋಜನೆಯಡಿ ಕಾನೂನು ಬಾಹಿರವಾಗಿ ಕಾಮಗಾರಿ ಕೈಗೊಳ್ಳಲಾಗಿದೆ. ಅದಕ್ಕಾಗಿ ಮರಗಳನ್ನು ಕಟಾವು ಮಾಡಲಾಗುತ್ತಿದೆ. ಜಿಲ್ಲಾಡಳಿತ ಮಧ್ಯಪ್ರವೇಶಿಸಿ ವ್ಯಾಕ್ಸಿನ್ ಡಿಪೋ ಸಂರಕ್ಷಿಸಲು ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ವ್ಯಾಕ್ಸಿನ್ ಡಿಪೋ ಪ್ರದೇಶ ಖಾಸಗಿ ವ್ಯಕ್ತಿಗಳ ಪಾಲಾಗುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾಡಳಿತ ಸೂಕ್ತ ಕ್ರಮ ಜರುಗಿಸಬೇಕು ಎಂದು ಮನವಿ ಮೂಲಕ ವಿನಂತಿಸಿದರು.

    ಅಭಿಷೇಕ ಕಾಂಬ್ಳೆ, ಸಂಗೀತಾ ಪರಿಹಾರ, ಪ್ರವೀಣ ಬಿದರಿ, ಶಶಿಕಾಂತ ದರಸಣ್ಣವರ, ಅರುಣ ಕುಲಕರ್ಣಿ, ಕಿಶೋರ ಸಿಂಗ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts