More

    ಸ್ವಚ್ಛತಾ ಹಿ ಸೇವಾ ವಿಶೇಷ ಆಂದೋಲನ

    Must Read

    ಬೆಳಗಾವಿ: ತ್ಯಾಜ್ಯ ಮುಕ್ತ ಭಾರತ ಎಂಬ ಘೋಷವಾಕ್ಯದೊಂದಿಗೆ ಸ್ವಚ್ಛತಾ ಹಿ ಸೇವಾ (ಸ್ವಚ್ಛತೆಯೇ ಸೇವೆ) ಎಂಬ ವಿಶೇಷ ಜನಾಂದೋಲನವನ್ನು ಸೆ.15 ರಿಂದ ಅ.2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ. ಸಿಇಒ ಹರ್ಷಲ್ ಭೋಯರ್ ರವರು ಹೇಳಿದರು.
    ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲದ ಪ್ರಯುಕ್ತ ನಗರದ ಚೆನ್ನಮ್ಮಾ ವೃತ್ತದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸೈಕಲ್ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
    ಅ.2 ರಂದು ಮಹಾತ್ಮಾ ಗಾಂಧೀಜಿಯವರ ಜನ್ಮ ದಿನದ ಸ್ಮರಣಾರ್ಥವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಹಾತ್ಮರ ಧ್ಯೇಯ ವಾಕ್ಯ ಸ್ವಚ್ಛತೆಯೇ ದೈವತ್ವ ಎಂಬ ಕನಸನ್ನು ನನಸಾಗಿಸಲು ವಿಶೇಷ ಜನಾಂದೋಲನವನ್ನು ಹಮ್ಮಿಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ ಎಂದರು. ಜಿಲ್ಲೆಯ ಎಲ್ಲ ತಾಲೂಕಿನ ಗ್ರಾಮ ಪಂಚಾಯತಿಗಳು ಗ್ರಾಮಗಳ ಸ್ವಚ್ಛತೆಗಾಗಿ ಸ್ವಯಂ ಪ್ರೇರಿತವಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸುವರು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನಜಂಗುಳಿ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ನದಿ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿ, ನಾಲಾಗಳು ಮುಂತಾದವುಗಳಲ್ಲಿ ದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಚಟುವಟಿಕೆಗಳನ್ನು ಆಯೋಜಿಸಲು ಸೂಚಿಸಲಾಗಿದೆ ಎಂದು ಭೋಯರ್ ಹೇಳಿದರು. ಜಿ.ಪಂ. ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ, ಜಿಲ್ಲಾ ಎಸ್‌ಬಿಎಮ್ ಸಮಾಲೋಚಕ ಬಾಹುಬಲಿ ಮೆಳವಂಕಿ, ಮಂಜುನಾಥ ಪಾಟೀಲ, ಪರಗೌಡ ಪಾಟೀಲ, ಸಾಗರ ರಾಮಗೊಂಡ ಮತ್ತು ಲಕ್ಷ್ಮಿಕಾಂತ ದೇವರಮನಿ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

    - Advertisement -spot_img
    - Advertisement -spot_img

    Latest News

    ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚನೆ

    ದಾವಣಗೆರೆ: ಲೋಕಸಭಾ ಚುನಾವಣಾ ಮತದಾನ ಮುಕ್ತಾಯವಾಗುವ 48 ಗಂಟೆ ಹಾಗೂ 24 ಗಂಟೆಗಳ ಅವಧಿಯಲ್ಲಿ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಕಟ್ಟೆಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ...
    - Advertisement -spot_img

    More Articles Like This

    - Advertisement -spot_img