More

    ಸ್ವಚ್ಛತೆಗೆ ಆದ್ಯತೆ ನೀಡಿ ಮಲೇರಿಯಾದಿಂದ ದೂರ ಇರಿ

    ಹುಲಸೂರು: ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಎಲ್ಲೆಡೆ ಅಸ್ವಚ್ಚತೆಯ ಆಗರವಾಗಿದೆ. ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಿ ಸ್ಚಚ್ಛತೆಗೆ ಆದ್ಯತೆ ನೀಡಿ ಮಲೇರಿಯಾ ರೋಗದಿಂದ ದೂರವಿರಿ ಎಂದು ಡಾ.ಗುರುರಾಜ ಗೌರಿ ಹೇಳಿದರು.
    ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಬಗ್ಗೆ ಜನ ಜಾಗೃತಿ ಜಾಥಾ ಕಾರ್ಯಕ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ಕೊಳಚೆ ಮತ್ತು ಮಳೆ ನೀರು ನಿಲ್ಲುವುದ್ದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾ, ಕಾಲರಾ ಸೇರಿದಂತೆ ವಿವಿಧ ರೋಗಗಳು ಅಂಟಿಕೊಳ್ಳುವ ಸಾಧ್ಯತೆ ಹೆಚ್ಚು. ಸಾರ್ವಜನಿಕ ಸ್ಥಳದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕೆಂದು ತಾಕೀತು ಮಾಡಿದರು.
    ಜಿಲ್ಲೆಯಲ್ಲಿ ಕರೊನಾ ಹೆಚ್ಚು ಹರಡುತಿದ್ದು, ಜನರು ನಿರ್ಲಕ್ಷೃ ಮಾಡದೆ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ಸೋಪಗಳಿಂದ ತೊಳೆಯುವುದು, ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು.
    ಗ್ರಾಮದ ವಿವಿಧ ಬಡಾವಣೆಯಲ್ಲಿ ಪಾದಯಾತ್ರೆ ಮೂಲಕ ಜನಜಾಗೃತಿ ಮಾಡಲಾಯಿತು. ಪಿಡಿಒ ಓಂಕಾರ ಬಿರಾದಾರ, ಸುಭಾಷ ಕಾಮಶೆಟ್ಟೆ, ಸಂಗಮೇಶ ಬಿರಾದಾರ, ವಿಜಯಕುಮಾರ, ರೇಬಿಕಾ, ರೇಷ್ಮಾ, ಮಾಣಿಕಬಾಯಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts