More

    ಸ್ವಚ್ಛತೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ

    ಚಿಕ್ಕಬಳ್ಳಾಪುರ : ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಕಾಪಾಡಲು ಹೆಚ್ಚಿನ ಒತ್ತು ನೀಡಿ, ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಡಿವಾಣ ಹಾಕಲು ಜಿಪಂ ಸಿಇಒ ಬಿ.ಫೌಜೀಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಸೋಮವಾರ ಚಿಕ್ಕಬಳ್ಳಾಪುರ ತಾಲೂಕಿನ ಗ್ರಾಪಂಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ವಿವಿಧೆಡೆ ಮಳೆಯಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಪಿಡಿಒಗಳು ಆರೋಗ್ಯಕರ ವಾತಾವರಣಕ್ಕೆ ಶ್ರಮಿಸಬೇಕು. ಜನರಿಗೆ ಮೂಲಸೌಕರ್ಯ ಒದಗಿಸಬೇಕು. ಸ್ವಚ್ಛತೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಬಾರದು ಎಂದರು.

    ಕರೊನಾ ನಿರ್ವಹಣೆಗಾಗಿ ಗ್ರಾಪಂ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ರಚಿಸಲಾಗಿದೆ. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುವ ಸಾಧ್ಯತೆ ಇರುವುದರಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಸೋಂಕು ಹರಡುವಿಕೆ ತಡೆ, ಲಕ್ಷಣವಿರುವವರ ಪತ್ತೆ ಮತ್ತು ಚಿಕಿತ್ಸೆ ಕೊಡಿಸುವುದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಬಾರದು ಎಂದು ತಿಳಿಸಿದರು.

    ಈಗಾಗಲೇ ತಾಲೂಕಿನ 12 ಗ್ರಾಪಂಗಳಲ್ಲಿ ಸೂಕ್ತ ಸ್ಥಳ ಗುರುತಿಸಿ, ಘನ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗಿದೆ. ಉಳಿದ ಕಡೆಯೂ ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಕೈಗೊಳ್ಳಬೇಕು. ಇದರಲ್ಲಿನ ಬೆಳವಣಿಗೆಗಳ ಬಗ್ಗೆ ವರದಿ ಸಲ್ಲಿಸಬೇಕು, ಪ್ರತಿ ಗ್ರಾಪಂನಲ್ಲಿ ಒಣ ಹಾಗೂ ಹಸಿ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸುವ ಕೆಲಸವಾಗಬೇಕು. ಮನೆಗಳಿಂದಲೇ ಸಮರ್ಪಕ ಕಸ ವಿಂಗಡಣೆಯಾಗುವ ನಿಟ್ಟಿನಲ್ಲಿ ಜನರಿಗೆ ಸಲಹೆ ಸೂಚನೆ ನೀಡಬೇಕು ಎಂದು ಹೇಳಿದರು.ಜಿಪಂ ಯೋಜನಾ ನಿರ್ದೇಶಕ ಕೆ.ಗಿರಿಜಾ ಶಂಕರ್, ತಾಪಂ ಇಒ ಹರ್ಷವಧರ್ನ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts