More

    ಸ್ವಪಕ್ಷೀಯರಿಂದಲೇ ಯಡಿಯೂರಪ್ಪಗೆ ಕಿರುಕುಳ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಬೇಸರ

    ಆನೇಕಲ್: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ದಿನದಿಂದಲೂ ಸ್ವಪಕ್ಷೀಯರೇ ಅವರನ್ನು ತುಳಿಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬೇಸರ ವ್ಯಕ್ತಪಡಿಸಿದರು.

    ಬನ್ನೇರುಘಟ್ಟ ಸಮೀಪದ ಲೊಯೋ ಲಾ ಕಾಲೇಜು ಕ್ರೀಡಾಂಗಣದಲ್ಲಿ ಕೆವೈಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಿಕಾ ರೆಡ್ಡಿ ಅವರು ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 1,200ಕ್ಕೂ ಹೆಚ್ಚು ಆಟೋ ಚಾಲಕರಿಗೆ ಸಮವಸ, ದಿನಸಿಕಿಟ್ ವಿತರಿಸಿ ಮಾತನಾಡಿದರು.

    ಬಿಜೆಪಿಯಲ್ಲಿ ಕೆಲ ನಾಯಕರು ಯಡಿಯೂರಪ್ಪ ಅವರ ಆಡಳಿತ ಸಹಿಸದೆ ಪದೇಪದೆ ಅವರ ವಿರುದ್ಧ ತಗಾದೆ ತೆಗೆಯುತ್ತಿರುವುದು ಇದೇ ಮೊದಲೇನಲ್ಲ. ಈಗ ಮತ್ತೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಸಂಚು ನಡೆಯುತ್ತಿದೆ. ಇದು ಅವರ ಪಕ್ಷದ ಆಂತರಿಕ ವಿಚಾರ. ಆದರೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಮರಳಲಿದೆ ಎಂದರು.

    ಶಾಮನೂರು ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಅವರ ಬೆಂಬಲಕ್ಕೆ ನಿಂತಿದ್ದಾರೆ. ಇದು ಅವರ ಸಮುದಾಯದ ವಿಚಾರ ಅಷ್ಟೆ. ಕಾಂಗ್ರೆಸ್‌ಗೂ ಅವರ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ. ಅದಕ್ಕೆ ಬೇರೆಯದೇ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

    ಕರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಡವರ ಪರ ನಿಲ್ಲುವಲ್ಲಿ ವಿಫಲವಾಗಿದೆ. ಆಟೋ, ಕಾರು ಚಾಲಕರಿಗೆ 3 ಸಾವಿರ ಧನಸಹಾಯ ನೀಡುವುದಾಗಿ ಹೇಳಿದ್ದರೂ, ಈವರೆಗೂ ಯಾರೊಬ್ಬರ ಖಾತೆಗೂ ಹಣ ರವಾನೆಯಾಗಿಲ್ಲ. ಇದರಿಂದ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಆಟೋ ಚಾಲಕರಿಗೆ ಕಾಂಗ್ರೆಸ್ ಮುಖಂಡ ರಾಜಗೋಪಾಲ್ ರೆಡ್ಡಿ ಹಾಗೂ ಅವರ ಕುಟುಂಬಸ್ಥರು ಸಮವಸ ಮತ್ತು ದಿನಸಿಕಿಟ್ ವಿತರಿಸುತ್ತಿದ್ದಾರೆ. ಇದು ಶ್ಲಾಘನೀಯ ಎಂದರು.

    ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಮುಖಂಡ ಎಚ್.ಪಿ. ರಾಜಗೋಪಾಲ್ ರೆಡ್ಡಿ ಮಾತನಾಡಿ , ಎಸ್‌ಎಸ್‌ಎಲ್‌ಸಿ ನಂತರ ಮಕ್ಕಳನ್ನು ಕೆಲಸಕ್ಕೆ ಕಳುಹಿಸಬೇಡಿ. ವಿದ್ಯಾಭ್ಯಾಸ ಮುಂದುವರಿಸಲಿ. ಕಷ್ಟ ಇರುವವರು ನನ್ನ ಬಳಿ ಬನ್ನಿ. ನಾನು ಅವರ ಕಾಲೇಜು ಶುಲ್ಕ ಕಟ್ಟುತ್ತೇನೆ ಎಂದು ಭರವಸೆ ನೀಡಿದರು.

    ಕರೊನಾ ಸಂದರ್ಭದಲ್ಲಿ ರೈತರು ಬಡವರ ಪರ ನಿಂತವರಲ್ಲಿ ಸಂಸದ ಡಿ.ಕೆ. ಸುರೇಶ್ ಪ್ರಮುಖರು. ಆದರೆ ಕೇಂದ್ರದಲ್ಲಿ ಬಡವರ ಅಭಿವೃದ್ಧಿ ಮಾಡುವುದಾಗಿ ಆಡಳಿತಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಡವರ ರಕ್ತ ಹೀರುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಗಗನಕ್ಕೇರಿಸಿದೆ. ಕಾಂಗ್ರೆಸ್ ಮಾತ್ರ ಬಡವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವ ಪಕ್ಷವಾಗಿದೆ.
    ಶ್ರೀನಿವಾಸ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ,ಕಿರಣ್, ಶ್ರೀಧರ್, ಲಕ್ಷ್ಮಣ್, ಯುವಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಿಕಾ ರೆಡ್ಡಿ, ಮುಖಂಡರಾದ ಮುದಾಸಿರ್, ಜೋಸ್ೆ, ಮುನಿನಾರಾಯಣ, ಗೋವಿಂದ, ವೀಣಾಗೌಡ, ಶೋಭಾಗೌಡ, ಅಶ್ವಿನಿ, ನಿರ್ಮಲಾ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts