More

    ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಸಿದ್ಧಪಡಿಸಿದ ಕೆಎಲ್​ಇ ಟೆಕ್ ವಿದ್ಯಾರ್ಥಿಗಳು

    ಹುಬ್ಬಳ್ಳಿ: ಕರೊನಾದಿಂದ ರಕ್ಷಿಸಿಕೊಳ್ಳಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯ. ಆದರೂ ಕೆಲವೊಮ್ಮೆ ಸೋಂಕು ನಮಗೆ ಅರಿವಿಲ್ಲದೆಯೇ ಹರಡುವ ಸಾಧ್ಯತೆಯಿದೆ. ಹಾಗಾಗಿ ಸದಾ ಎಚ್ಚರದಿಂದ ಇರಲೆಂದೇ ಇಲ್ಲಿನ ಕೆಎಲ್​ಇ ಇಂಜಿನಿಯರಿಂಗ್ ಟೆಕ್ ವಿದ್ಯಾರ್ಥಿಗಳ ತಂಡ ಸೆನ್ಸಾರ್ ಆಧಾರಿತ ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಸಿದ್ಧಪಡಿಸಿದ್ದಾರೆ.

    ಈಗಿರುವ ಹ್ಯಾಂಡ್ ಸ್ಯಾನಿಟೈಸರ್​ನ್ನು ಕೈಯಿಂದ ಮುಟ್ಟಿ ಬಳಸಬೇಕು. ಕೋವಿಡ್-19 ಆಸ್ಪತ್ರೆಗಳಲ್ಲಿ ಪಿಪಿಇ ಕಿಟ್ ಧರಿಸಿರುವ ವೈದ್ಯರು, ಶುಶ್ರೂಷಕರಿಗೂ ಈ ರೀತಿಯ ಸ್ಯಾನಿಟೈಸರ್ ಬಳಸುವುದು ಕಷ್ಟ. ಇದನ್ನರಿತ ವಿದ್ಯಾರ್ಥಿಗಳಾದ ಕಾರ್ತಿಕ್ ವಿ.ಆರ್, ಅಭಿಲಾಷ್ ಜಿ, ವಿನಾಯಕ, ಪ್ರವೀಣ, ಸಂತೋಷ, ಅಭಿಲಾಷ್ ಕೆ. ನೇತೃತ್ವದ ತಂಡ ಸೆನ್ಸಾರ್ ಆಧರಿತ ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಸಿದ್ಧಪಡಿಸಿದೆ. ಕೆಎಲ್​ಇ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ರವಿ ಗುತ್ತಲ, ಕಿಮ್್ಸ ಉಪ ವೈದ್ಯಕೀಯ ಅಧೀಕ್ಷಕ ಡಾ. ಎಸ್.ವೈ. ಮುಲ್ಕಿಪಾಟೀಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

    ಸಚಿವರ ಮೆಚ್ಚುಗೆ: ವಿದ್ಯಾರ್ಥಿಗಳ ಸಂಶೋಧನೆಗೆ ಸಚಿವ ಜಗದೀಶ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಸರ್​ನ್ನು ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ವಿದ್ಯಾರ್ಥಿಗಳು ಹಸ್ತಾಂತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts