More

    ಸ್ವಯಂ ಕಡಿವಾಣ ಹಾಕಿಕೊಳ್ಳಿ

    ತೀರ್ಥಹಳ್ಳಿ: ಕರೊನಾ ಸೋಂಕು ನಿಯಂತ್ರಣಕೆಕ ತಾಲೂಕಿನ ಜನತೆ ಸ್ವಯಂ ಕಡಿವಾಣ ಹಾಕಿಕೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ನಿರಾಳವಾಗಿ ಕೆಲಸ ಮಾಡಲಾಗದ ಸ್ಥಿತಿ ನಿರ್ವಣವಾಗಿದೆ. ಪಪಂ ಕೂಡ ಸೀಲ್​ಡೌನ್ ಆಗಿದ್ದು, ಅಧಿಕಾರಿಗಳು ಒತ್ತಡಕ್ಕೆ ಸಿಲುಕಿದ್ದಾರೆ. ಸಮುದಾಯ ಮತ್ತು ವ್ಯಕ್ತಿಗಳೇ ಸ್ವಯಂ ನಿಯಂತ್ರಣ ಹಾಕಿಕೊಳ್ಳುವ ಮೂಲಕ ಮಾರಣಾಂತಿಕ ಕಾಯಿಲೆಯನ್ನು ನಿಯಂತ್ರಿಸಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೂ ಸೂಚನೆ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ರೋಗದ ಭೀಕರತೆ ಬಗ್ಗೆ ಅರಿವಿಲ್ಲದವರಂತೆ ಜನ ಬೆಳಗ್ಗೆಯಿಂದ ಸಂಜೆವರೆಗೂ ಅನಗತ್ಯವಾಗಿ ಪಟ್ಟಣದಲ್ಲಿ ಸುತ್ತಾಡುತ್ತಾರೆ. ಜನರ ಈ ವರ್ತನೆ ರೋಗ ಹರಡುವುದಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಹೀಗಾಗಿ ಜನರ ಅನಗತ್ಯ ಓಡಾಟವನ್ನು ನಿಯಂತ್ರಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಜನರ ಆರೋಗ್ಯ ದೃಷ್ಟಿಯಿಂದ ಇದು ಅನಿವಾರ್ಯ ಎಂದರು.

    ಕರೊನಾ ಕೇರ್ ಸೆಂಟರ್ ಬಗ್ಗೆ ಅಪನಂಬಿಕೆ ಬೇಡ. ಸೋಂಕಿತರನ್ನು ಆಪ್ತವಾಗಿ ನೋಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಕೇಳಿ ಬರುತ್ತಿರುವ ಅಪಪ್ರಚಾರದ ಬಗ್ಗೆ ಜನರು ಕಿವಿಗೊಡಬಾರದು. ಪ್ರತಿದಿನ ಆಯುರ್ವೆದ ಹಾಗೂ ಮನೆ ಮದ್ದು ಬಳಸುವುದು ಸೂಕ್ತ. ರೋಗ ಲಕ್ಷಣ ಕಂಡುಬಂದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

    ತಾಪಂ ಸದಸ್ಯ ಪ್ರಶಾಂತ್ ಕುಕ್ಕೆ, ತಹಸಿಲ್ದಾರ್ ಡಾ. ಎಸ್.ಬಿ.ಶ್ರೀಪಾದ್, ತಾಪಂ ಇಒ ಆಶಾಲತಾ, ಟಿಎಚ್​ಒ ಡಾ. ಅಶೋಕ್, ಗೀತಾ ಶೆಟ್ಟಿ, ಕೆ.ನಾಗರಾಜ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

    ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಆರಗ ಜ್ಞಾನೇಂದ್ರ ಅವರನ್ನು ಇದೇ ಸಂದರ್ಭದಲ್ಲಿ ತಾಲೂಕು ವರ್ತಕರ ಸಂಘದಿಂದ ಸನ್ಮಾನಿಸಲಾಯಿತು. ಅಧ್ಯಕ್ಷ ಚೈತನ್ ಜವಳಿ, ಕಾರ್ಯದರ್ಶಿ ಡಾನ್ ರಾಮಣ್ಣ, ಉಪಾಧ್ಯಕ್ಷ ರಾಘವೇಂದ್ರ ಮಲ್ಯ ಇತರರಿದ್ದರು.

    ಪಿಯುಸಿ ವಿದ್ಯಾರ್ಥಿಗಳಿಗೆ ತಾಲೂಕಿನಲ್ಲಿ ಮೊದಲ ಬಾರಿಗೆ ಸಿಇಟಿ ಬರೆಯುವ ಅವಕಾಶ ದೊರೆತಿದೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜು.30 ಹಾಗೂ 31ರಂದು 627 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ.

    ಆರಗ ಜ್ಞಾನೇಂದ್ರ, ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts